ಭೋಪಾಲ್: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಿರಿಯ ನಾಯಕ ಹಾಗೂ ಎರಡು ಬಾರಿ ಮಧ್ಯ ಪ್ರದೇಶ ಮುಖ್ಯಮಂತ್ರಿಯಾಗಿದ್ದ ಸುಂದರ್ಲಾಲ್ ಪಟ್ವಾ (92) ಬುಧವಾರ ಭೋಪಾಲ್ನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಧ್ಯಪ್ರದೇಶದ ಮಂಡಸೌರ್ ಜಿಲ್ಲೆಯ ಕುಕಡೇಶ್ವರದಲ್ಲಿ 1924ರಲ್ಲಿ ಜನಿಸಿದ್ದ ಸುಂದರ್ಲಾಲ್ ಪಟ್ವಾ ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ ಎಂದು ವರದಿ ತಿಳಿಸಿದೆ.
ದರ್ಲಾಲ್ ಪಟ್ವಾ ಅವರು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ರಾಜಕೀಯ ಮಾರ್ಗದರ್ಶಕರಾಗಿದ್ದರು ಎನ್ನಲಾಗಿದೆ.
ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ವರ ಕುಟುಂಬದೊಂದಿಗೆ ನನ್ನ ನೆನಪುಗಳಿದ್ದು, ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಸುಂದರ್ಲಾಲ್ ಪಟ್ವಾ ಅವರು ಬಿಜೆಪಿಯನ್ನು ಬಲಪಡಿಸುವಲ್ಲಿ ಶ್ರಮಿಸಿದ್ದು, ಅವರು ಯಾವಾಗಲೂ ಕಾರ್ಯಕರ್ತರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಸುಂದರ್ಲಾಲ್ ಪಟ್ವಾ ಅವರ ನಿಧನವನ್ನು ಒಂದು ಯುಗದ ಅಂತ್ಯ ಎಂದು ಹೇಳಿದ ಮಧ್ಯಪ್ರದೇಶ ಬಿಜೆಪಿ ಅಧ್ಯಕ್ಷ ನಂದಕುಮಾರ್ ಚೌಹಾಣ್, ಇದು ಮಧ್ಯಪ್ರದೇಶ ಬಿಜೆಪಿಗೆ ತುಂಬಲಾಗದ ಹಾನಿಯಾಗಿದೆ ಎಂದು ಹೇಳಿದ್ದಾರೆ.
ಪಟ್ವಾ ಅವರನ್ನು 1980ರಲ್ಲಿ ಎರಡು ತಿಂಗಳ ಅವಧಿಗೆ ಮತ್ತು 1990ರಿಂದ 92ರ ವರೆಗೆ ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ನೇಮಿಸಲಾಗಿತ್ತು. 1997ರ ಚುನಾವಣೆ ಬಳಿಕ ಅವರನ್ನು ಲೋಕಸಭೆಗೆ ಆಯ್ಕೆ ಮಾಡಲಾಗಿತ್ತು. ಆದರೆ 1998ರ ಚುನಾವಣೆಯಲ್ಲಿ ಸೋಲನುಭವಿಸಿದ್ದರು.
1999 ಚುನಾವಣೆಯಲ್ಲಿ ಮತ್ತೆ ಲೋಕಸಭೆಗೆ ಆಯ್ಕೆಯಾದ ಅವರು, ಅಂದಿನ ಎನ್ಡಿಎ ಸರ್ಕಾರದಲ್ಲಿ ಸಚಿವರಾಗಿ ಆಯ್ಕೆಯಾದ್ದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಿದ್ಧಾಂತವಾದಿ ಆಗಿದ್ದ ಪಟ್ವಾ ಅವರು ಅವಿಭಜಿತ ಮಧ್ಯಪ್ರದೇಶದಲ್ಲಿ ಬಿಜೆಪಿಯ ನೆಲೆಯನ್ನು ಕ್ರೋಢೀಕರುಸುವಲ್ಲಿ ಮಹತ್ಬದ ಪಾತ್ರ ವಹಿಸಿದ್ದರು. ಇತ್ತೀಚೆಗಿನವರೆಗೆ ಅವರು ಮಧ್ಯಪ್ರದೇಶ ಮಾರ್ಗದರ್ಶಕ ಮಂಡಲ್ನ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.