ನವದೆಹಲಿ: ವಿಮಾನ ನಿಲ್ದಾಣಗಳಲ್ಲಿ ಭದ್ರತೆಯನ್ನು ಹೆಚ್ಚಿಸುವ ಸಲುವಾಗಿ ದೇಶಾದ್ಯಂತ ವಿಮಾನ ನಿಲ್ದಾಣಗಳ ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರು ವಿಮಾನ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನಕ್ಕೆ ಬಳಸುವ ಏರ್ಪೋರ್ಟ್ ಎಂಟ್ರಿ ಪಾಸ್ (ಎಇಪಿ) ಜೊತೆ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ಒದಗಿಸಬೇಕಿದೆ.
ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಅಥವಾ ನಾಗರಿಕ ವಿಮಾನಯಾನ ಪಡೆಯ ಮನವಿಯಂತೆ ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (ಬಿಸಿಎಎಸ್) ಈ ಆದೇಶ ಹೊರಡಿಸಿದ್ದು, ಸಿಐಎಸ್ಎಫ್ ಇದನ್ನು ಜನವರಿ 1ರಿಂದ ಜಾರಿಗೆ ತರಲಿದೆ.
ವಿಮಾನಯಾನ ನೌಕರರ ಎಲ್ಲ ಎಇಪಿಗಳಿಗೆ ಜ.೧ರಿಂದ ಆಧಾರ್ ಸಂಖ್ಯೆಯ ಬಳಕೆ ಕಡ್ಡಾಯವಾಗಿರಲಿದೆ. ಈ ನಿಟ್ಟಿನಲ್ಲಿ ಸಮಿತಿ ರೂಪಿಸಲಾಗಿದ್ದು, ಸಮಿತಿಯು ಈ ಆದೇಶ ಹೊರಡಿಸಿದೆ. ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ನೌಕರರ ಅಸ್ತಿತ್ವದಲ್ಲಿರುವ ಪಾಸ್ಗಳ ವ್ಯಾಲಿಡಿಟಿಯನ್ನು ಮಾರ್ಚ್ 31ರ ವರೆಗೆ ವಿಸ್ತರಿಸಲಾಗಿದೆ ಎಂದು ಸಿಐಎಸ್ಎಫ್ ಮಹಾನಿರ್ದೇಶಕ ಒ.ಪಿ. ಸಿಂಗ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.