ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನ.೮ರಂದು ರೂ.500 ಮತ್ತು 1000 ರೂ. ನೋಟುಗಳನ್ನು ನಿಷೇಧಿಸುವುದಾಗಿ ಘೋಷಿಸಿದ ನಂತರ ಮೊದಲ ಬಾರಿ ಡಿ.31ರಂದು ಸಂಜೆ 7.30ಕ್ಕೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಅಂತೆಯೇ ಅನಾಣ್ಯೀಕರಣದ ನಂತರ ಹಳೆ ನೋಟುಗಳನ್ನು ಠೇವಣಿ ಮಾಡಲು ಸರ್ಕಾರ ನೀಡಿದ್ದ 50 ದಿನಗಳ ಅವಧಿ ನಾಳೆ ಪೂರ್ಣಗೊಳ್ಳಲಿದೆ.
ಅನಾಣ್ಯೀಕರಣದಿಂದ ಆರ್ಥಿಕತೆಯಲ್ಲಿ ಉಂಟಾಗಿರುವ ಸಮಸ್ಯೆಗಳು, ವಿಸೇಷವಾಗಿ ನಗದು ಹರಿವು ಸಮಸ್ಯೆಯನ್ನು ಈಡೇರಿಸಲು ಕೇಂದ್ರ ಸರ್ಕಾರ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಪ್ರಧಾನಿ ಮೋದಿ ಅವರು ಮಾತನಾಡಲಿದ್ದಾರೆ ಎನ್ನಲಾಗಿದೆ.
ಆರ್ಥಿಕ ಸಮಸ್ಯೆಗಳ ನಿವಾರಣೆಗೆ ಸರ್ಕಾರದ ಕ್ರಮಗಳ ಬಗ್ಗೆಯೂ ಅವರು ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನೋಟು ನಿಷೇಧ ಭವಿಷ್ಯದಲ್ಲಿ ದೀರ್ಘಕಾಲದ ಲಾಭವನ್ನು ನೀಡಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.