ನವದೆಹಲಿ: ಒಂದು ಮಹತ್ವದ ತೀರ್ಪೀನಂತೆ ಸುಪ್ರೀಂ ಕೋರ್ಟ್ ಯಾವುದೇ ರಾಜಕಾರಣಿಗಳು ಜಾತಿ, ಮತ, ಧರ್ಮದ ಹೆಸರಲ್ಲಿ ಚುನಾವಣೆಗಳಲ್ಲಿ ಮತಗಳನ್ನು ಪಡೆಯಲು ಸಾಧ್ಯವಿಲ್ಲ ಎಂದು ಸೂಚಿಸಿದೆ.
ಚುನಾವಣಾ ಪ್ರಕ್ರಿಯೆಯಲ್ಲಿ ಧರ್ಮ ಯಾವುದೇ ಪಾತ್ರವನ್ನು ಹೊಂದಿರುವುದಿಲ್ಲ. ಚುನಾವಣೆ ಜಾತ್ಯಾತೀತ ಪ್ರಕ್ರಿಯೆಯಾಗಿದೆ. ತನ್ಮೂಲ ಅದರ ಹಾದಿ ಮತ್ತು ಪ್ರಕ್ರಿಯೆಗಳನ್ನು ಪಾಲಿಸಬೇಕಿದೆ ಎಂದು ಏಳು ಮಂದಿ ನ್ಯಾಯಾಧೀಶರ ನ್ಯಾಯಪೀಠ ತಿಳಿಸಿದೆ.
ಮನುಷ್ಯ ಮತ್ತು ದೇವರ ನಡುವಿನ ಸಂಬಂಧಗಳು ಒಂದು ವೈಯಕ್ತಿಕ ಆಯ್ಕೆಯಾಗಿದ್ದು, ರಾಜ್ಯಗಳು ಇಂತಹ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಧರ್ಮದ ಹೆಸರಿನಲ್ಲಿ ಮತಗಳನ್ನು ಪಡೆಯಲು ಯಾವುದೇ ಮನವಿ ಮಾಡಿದರೂ ಅದು ಚುನಾವಣಾ ಕಾನೂನಿನ ಅಡಿಯಲ್ಲಿ ಭ್ರಷ್ಟ ನಡೆಯಾಗುತ್ತದೆ ಎಂದು ಕೋರ್ಟ್ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.