ಬೆಂಗಳೂರು: ’ಕೈ’ಗೆ ಗುಡ್ಬೈ ಹೇಳಿ ಕಮಲ ಪಾಳಯಕ್ಕೆ ಅಧಿಕೃತವಾಗಿ ಕಾಂಗ್ರೆಸ್ನ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಸೋಮವಾರ ಸೇರ್ಪಡೆಗೊಂಡರು.
ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದ ಧ್ವಜವನ್ನು ಶ್ರೀನಿವಾಸ್ ಪ್ರಸಾದ್ ಅವರಿಗೆ ನೀಡಿ ಸ್ವಾಗತಿಸಿದರು.
ಸಚಿವ ಸ್ಥಾನಗಳಿಸಿದ್ದರೂ ಸಿ.ಎಂ.ಸಿದ್ದರಾಮಯ್ಯ ಅವರೊಂದಿಗಿನ ಭಿನ್ನಾಭಿಪ್ರಾಯ ಪರಿಣಾಮ ಕಾಂಗ್ರೆಸ್ ತೊರೆದು ಬಿಜೆಪಿಯತ್ತ ತಮ್ಮ ಚಿತ್ತ ಹರಿಸುವುದಾಗಿ ಅವರು ಹೇಳಿದ್ದರು.
ಮಾಜಿ ಸಿಎಂ ಜಗದೀಶ ಶೆಟ್ಟರ್, ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಅನಂತಕುಮಾರ್, ಕೆ.ಎಸ್.ಈಶ್ವರಪ್ಪ ಸೇರಿದಂತೆ ಪ್ರಮುಖರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಂಜನಗೂಡು ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಶ್ರೀನಿವಾಸ್ ಪ್ರಸಾದ್ ಅವರೇ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.