ನವದೆಹಲಿ: ಮಹದಾಯಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕಾವೇರಿ ನ್ಯಾಯಾಧಿಕರಣಕ್ಕೆ ನೂತನ ಅರ್ಜಿ ಸಲ್ಲಿಸಲು ’ಸುಪ್ರೀಂ’ ರಾಜ್ಯ ಸರ್ಕಾರಕ್ಕೆ ಸೋಮವಾರ ಅನುಮತಿ ನೀಡಿದೆ.
ಕುಡಿಯುವ ನೀರಿನ ಯೋಜನೆಗಾಗಿ ಮಹದಾಯಿಯಿಂದ 7 ಟಿಎಂಸಿ ನೀರು ಬಿಡುಗಡೆ ಮಾಡಬೇಕೆಂದು ಕರ್ನಾಟಕ 2016ರಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧಿಕರಣ ತಿರಸ್ಕರಿಸಿತ್ತು.
ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಸುಪ್ರೀಂ ಮುಂದೆ ವಿಶೇಷ ಅರ್ಜಿಯನ್ನು ಸಲ್ಲಿಸಿತ್ತು. ರಾಜ್ಯದ ಪರವಾಗಿ ಫಾಲಿ ನಾರಿಮನ್ ಅವರು ವಾದ ಮಂಡಿಸಿದ್ದರು. ವಾದ ಆಲಿಸಿದ ಸುಪ್ರೀಂ, ಅಗತ್ಯವಾದ ಅಂಕಿ ಸಂಖ್ಯೆಗಳೊಂದಿಗೆ ನೂತನ ಅರ್ಜಿಯನ್ನು ನ್ಯಾಯಾಧಿಕರಣಕ್ಕೆ ಸಲ್ಲಿಸಲು ಆದೇಶಿಸಿದೆ.
ಕಳೆದ ವಾರವಷ್ಟೇ ಪ್ರಧಾನಿಯವರನ್ನು ಭೇಟಿ ಮಾಡಿದ್ದ ಸಿಎಂ ಸಿದ್ದರಾಮಯ್ಯನವರು ಮಹದಾಯಿ ವಿಷಯ ಕುರಿತು ಚರ್ಚಿಸಿದ್ದರು. ಹಲವು ದಶಕಗಳಿಂದ ಮಹದಾಯಿ ನೀರು ಹಂಚಿಕೆಗಾಗಿ ಉತ್ತರ ಕರ್ನಾಟಕದಲ್ಲಿ ತೀವ್ರ ಹೋರಾಟ ನಡೆದು ಬಂದಿದ್ದು, ಇನ್ನಾದರೂ ಜೀವಜಲ ಬಿಸಿಲು ಕುದುರೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.