ನವದೆಹಲಿ: ಭಾರತದಲ್ಲಿ ಕ್ಷಿಪಣಿಯ ಯಶಸ್ವಿ ಪ್ರಯೋಗಗಳ ಪರಿಣಾಮ ಪಾಕ್ ಒತ್ತಡದಲ್ಲಿದೆ ಎಂದು ಮಾಜಿ ಸೇನಾ ಮುಖ್ಯಸ್ಥ (ನಿವೃತ್ತ) ಜ.ದೀಪಕ್ ಕಪೂರ್ ಹೇಳಿದ್ದಾರೆ.
ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಭಾರತದ ಯಶಸ್ವಿ ಕ್ಷಿಪಣಿ ಪ್ರಯೋಗಕ್ಕೆ ಪ್ರತಿಯಾಗಿ ತಾನೂ ಭೂಮಿ ಮೂಲದ ಖಂಡಾಂತರ ಕ್ಷಿಪಣಿ ಹಾಗೂ ಸಬ್ ಮರೈನ್ನಿಂದ ಕ್ಷಿಪಣಿಯನ್ನು ಉಡಾವಣೆ ಮಾಡಿದ್ದಾಗಿ ಹೇಳಿಕೊಂಡಿದ್ದು, ಇದು ಸತ್ಯಕ್ಕೆ ದೂರ ಎಂದಿದ್ದಾರೆ.
ಉಗ್ರ ಬುರ್ಹಾನ್ ಸತ್ತ ಮೇಲೆ ಜಮ್ಮು ಕಾಶ್ಮೀರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಾಕಿಸ್ಥಾನ ಹಾಗೂ ಪ್ರತ್ಯೇಕತಾವಾದಿಗಳ ಕೈವಾಡವಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಹೇಳಿದ್ದು ಸ್ವಾಗತಾರ್ಹ. ಒಮ್ಮೆಯಾದರೂ ಅವರಿಗೆ ಸತ್ಯ ವಿಚಾರ ಹೊಳೆಯಿತಲ್ಲ ಎಂದಿದ್ದಾರೆ.
ಖಂಡಿತಾ ಮುಫ್ತಿ ಅವರ ಮಾತನ್ನು ಅಲ್ಲಗಳೆಯುವಂತಿಲ್ಲ. ಏಕೆಂದರೆ ಪಾಕಿಸ್ತಾನವು ಕಾಶ್ಮೀರದಲ್ಲಿನ ಪ್ರತ್ಯೇಕತಾವಾದಿಗಳಿಗೆ ನಿರ್ದೇಶನ ನೀಡುವ ಮೂಲಕ ಭಯೋತ್ಪಾದಕ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತದೆ ಎಂದು ಕಪೂರ್ ಹೇಳಿದ್ದಾರೆ.
ಆಧುನಿಕ ಶಸ್ತ್ರಾಸ್ತ್ರಗಳಿಗೆ ಸಂಬಂಧಿಸಿದಂತೆ ಭಾರತದಲ್ಲಿ ಹೆಚ್ಚಿನ ಬಜೆಟ್ ಮೀಸಲಿಡಬೇಕಿದ್ದು, ಚೈನಾ ಹಾಗೂ ಮುಂದುವರಿದ ರಾಷ್ಟ್ರಗಳಿಗಿಂತಲೂ ಅಧಿಕ ಪ್ರಮಾಣದ ಬಜೆಟ್ ಅಗತ್ಯವಿದೆ. ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಜಿಡಿಪಿ ಪ್ರತಿಶತ ಮೂರರಷ್ಟು ಮೀಸಲಿಟ್ಟರೆ, ನಮ್ಮಲ್ಲಿ ಅಂದಾಜು 10 ವರ್ಷಗಳಿಂದ ಜಿಡಿಪಿಯ ಪ್ರತಿಶತ 2 ಕ್ಕಿಂತಲೂ ಕಡಿಮೆ ಇದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.