ನವದೆಹಲಿ: ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸದ ಎದುರು ಪ್ರತಿಭಟನೆಯಲ್ಲಿ ತೊಡಗಿದ್ದ 120 ಕ್ಕೂ ಹೆಚ್ಚು ಬಿಜೆಪಿಯ ಪುರಸಭಾ ಸದಸ್ಯರನ್ನು ಪೊಲೀಸರು ಬಲವಂತವಾಗಿ ಬಂಧಿಸಿದ ಘಟನೆ ಶುಕ್ರವಾರ ನಡೆದಿದೆ.
ಪೌರ ಕಾರ್ಮಿಕರಿಗೆ (ಸ್ಯಾನಿಟರಿ ವಿಭಾಗ) ಸಂಬಳ ನೀಡಲು ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಬಿಜೆಪಿಯ ಹಿರಿಯ ಮುಖಂಡ ಸುಭಾಷ್ ಆರ್ಯಾ ಅವರ ನೇತೃತ್ವದಲ್ಲಿ ಪ್ರತಿಭಟನೆ ಕೈಗೊಳ್ಳಲಾಗಿತ್ತು. ದೆಹಲಿಯ ನಾಲ್ಕನೇ ಹಣಕಾಸು ಆಯೋಗದ ವರದಿಯನ್ವಯ ಹಣ ಬಿಡುಗಡೆಗೊಳಿಸಲು ಆಗ್ರಹಿಸಲಾಗಿತ್ತು.
ಕಳೆದ ಕೆಲವು ತಿಂಗಳುಗಳಿಂದ ಸಂಬಳವನ್ನೇ ಪಡೆಯದ ಈಸ್ಟ್ ದೆಹಲಿ ಮುನ್ಸಿಪಲ್ ಕಾರ್ಪೋರೇಶನ್ನ ಕಾರ್ಮಿಕರು, ಒಂದು ವಾರದಿಂದ ಮುಷ್ಕರ ನಿರತರಾಗಿದ್ದರು. ಜ.9 ರಂದು ಕೇಜ್ರಿವಾಲ್ ಪ್ರತಿಕೃತಿಯನ್ನು ದಹಿಸುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದರು. ಅದರ ಪರಿಣಾಮ ಪುರಸಭೆಯಲ್ಲಿ ಬಹುಮತ ಹೊಂದಿರುವ ಬಿಜೆಪಿ ಸದಸ್ಯರು ಕೇಜ್ರಿವಾಲ್ ಮನೆ ಎದುರು ಪ್ರತಿಭಟನೆಗೆ ಮುಂದಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.