ನವದೆಹಲಿ: ವಿಶೇಷ ಆರ್ಥಿಕ ವಲಯಗಳ (ಎಸ್ಇಝೆಡ್) ಬಗ್ಗೆ ವಿವರವಾದ ಮಾಹಿತಿ ನೀಡುವ ‘ಎಸ್ಇಝೆಡ್ ಇಂಡಿಯಾ’ ಮೊಬೈಲ್ ಆ್ಯಪ್ನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಕೇಂದ್ರ ಸರ್ಕಾರದ ಇ-ಆಡಳಿತ ಉಪಕ್ರಮದ ಅಡಿಯಲ್ಲಿ ಈ ಆ್ಯಪ್ ಬಿಡುಗಡೆ ಮಾಡಲಾಗಿದ್ದು, ಎಸ್ಇಝೆಡ್ ಘಟಕಗಳು ಹಾಗೂ ಅಭಿವರ್ಧಕರು ಎಸ್ಇಝೆಡ್ ಆನ್ಲೈನ್ ವ್ಯವಸ್ಥೆ ಮೂಲಕ ತಾವು ನಡೆಸಿದ ವ್ಯವಹಾರಗಳ ಮಾಹಿತಿಗಳನ್ನು ಮೊಬೈಲ್ ಆ್ಯಪ್ ಮೂಲಕ ಪಡೆಯಲು ಸಾಧ್ಯವಾಗುತ್ತದೆ ಎಂದು ವಾಣಿಜ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಆಂಡ್ರಾಯ್ಡ್ ವೇದಿಕೆಯಲ್ಲಿ ಲಭ್ಯವಾಗಿರುವ ಈ ಆ್ಯಪ್ ಎಸ್ಇಝೆಡ್ ಮಾಹಿತಿ, ಎಸ್ಇಝೆಡ್ ಆನ್ಲೈನ್ ವ್ಯವಹಾರ, ವ್ಯಾಪಾರ ಮಾಹಿತಿ ಮತ್ತು ಸಂಪರ್ಕ ವಿವರಗಳು ಎಂಬ ನಾಲ್ಕು ವಿಭಾಗಗಳನ್ನು ಹೊಂದಿದೆ.
ಇದು ಆಮದು ಮತ್ತು ರಫ್ತಿನ ಸಾಗಣೆ ಬಿಲ್ ಸ್ಥಿತಿಯ ಟ್ರ್ಯಾಕಿಂಗ್, ಬಿಲ್ ಏಕೀಕರಣ ಮತ್ತು ಸಂಸ್ಕರಣೆಗೆ ಸಹಾಯಕವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.