ನವದೆಹಲಿ: ದೇಶದಲ್ಲಿ ಕ್ರೀಡಾ ಮೂಲಸೌಕರ್ಯ ಸೃಷ್ಟಿಸುವ ಗುರಿಯೊಂದಿಗೆ 14 ವರ್ಷದೊಳಗಿನ ಮತ್ತು 17 ವರ್ಷದೊಳಗಿನ ವಿದ್ಯಾರ್ಥಿಗಳ ರಾಷ್ಟ್ರ ಮಟ್ಟದ ಕ್ರೀಡಾ ಸ್ಪರ್ಧೆ ‘ಖೇಲೋ ಇಂಡಿಯಾ’ಗೆ ಕ್ರೀಡಾ ಸಚಿವ ವಿಜಯ್ ಗೋಯಲ್ ಚಾಲನೆ ನೀಡಿದ್ದಾರೆ.
ದೆಹಲಿಯಲ್ಲಿ ನಡೆಯಲಿರುವ ಕುಸ್ತಿ, ಸೈಕ್ಲಿಂಗ್ ಮತ್ತು ಈಜು ಸ್ಪರ್ಧೆಗಳನ್ನು ಭಾರತೀಯ ಕ್ರೀಡಾ ಮಂಡಳಿಯು ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವಾಲಯದ ಆಶ್ರಯದಲ್ಲಿ ಆಯೋಜಿಸಿದೆ.
ಖೇಲೋ ಇಂಡಿಯಾ ರಾಷ್ಟ್ರ ಮಟ್ಟದ ಸ್ಪರ್ಧೆಗಳು ಜನವರಿ ಮತ್ತು ಫೆಬ್ರವರಿ ತಿಂಗಳುಗಳಲ್ಲಿ ನಡೆಯಲಿವೆ.
ದೇಶದಲ್ಲಿ ಮೂಲಭೂತ ಮಟ್ಟದಲ್ಲಿ ಕ್ರೀಡೆಯನ್ನು ಪ್ರೋತ್ಸಾಹಿಸಲು ಹಾಗೂ ಕ್ರೀಡಾ ಮೂಲಸೌಕರ್ಯ ವರ್ಧಿಸಲು ಈ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ಇದು ರಾಷ್ಟ್ರ ಮಟ್ಟದಲ್ಲಿ ಕ್ರೀಡಾಪಟುಗಳು ಪ್ರತಿಭೆ ವೃದ್ಧಿಸಲು ಉತ್ತಮ ವೇದಿಕೆಯಾಗಲಿದೆ. ಜನವರಿ ತಿಂಗಳಲ್ಲಿ ಕ್ರೀಡಾ ಪ್ರತಿಭೆಗಳಿಗಾಗಿ ರಾಷ್ಟ್ರೀಯ ಪೋರ್ಟಲ್ ಬಿಡುಗಡೆ ಮಾಡಲಾಗುವುದು ಎಂದು ಗೋಯಲ್ ತಿಳಿಸಿದ್ದಾರೆ.
ದೇಶದ 25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸುಮಾರು 1000 ಕ್ರೀಡಾಪಟುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದು, ಪ್ರೇಕ್ಷಕರಿಗೆ ಸ್ಪರ್ಧೆ ನಡೆಯುವ ಸ್ಥಳಗಳಲ್ಲಿ ಉಚಿತ ಪ್ರವೇಶ ಇರಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.