ಬೆಂಗಳೂರು: ಇನ್ನು 3 ತಿಂಗಳೊಳಗೆ ಬಿಬಿಎಂಪಿ ಚುನಾವಣೆಯನ್ನು ನಡೆಸಬೇಕು ಎಂದು ರಾಜ್ಯಸರ್ಕಾರಕ್ಕೆ ಮಂಗಳವಾರ ಸುಪ್ರೀಂಕೋರ್ಟ್ ಆದೇಶ ನೀಡಿದೆ.
ರಾಜ್ಯ ಹೈಕೋರ್ಟ್ ವಿಭಾಗೀಯ ಪೀಠ ಚುನಾವಣೆಗೆ ನೀಡಿದ್ದ ಆರು ತಿಂಗಳ ತಡೆಯನ್ನು ಇಂದು ಸುಪ್ರೀಂ ರದ್ದುಗೊಳಿಸಿದೆ. ಈ ಆದೇಶದಿಂದಾಗಿ ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ನಾನಾ ಕಸರತ್ತುಗಳನ್ನು ಮಾಡಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.
ಇದೀಗ ಸರ್ಕಾರ ಮೂರು ತಿಂಗಳೊಳಗೆ ಚುನಾವಣೆ ನಡೆಸಿ ಆ ಬಳಿಕವೇ ವಿಭಜನೆಯ ಪ್ರಕ್ರಿಯೆ ಆರಂಭಿಸುವುದಾಗಿ ಸುಪ್ರೀಂಗೆ ಪ್ರಮಾಣ ಪತ್ರ ಸಲ್ಲಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.