ನವದೆಹಲಿ: ನೇತಾಜೀ ಸುಭಾಷ್ ಚಂದ್ರ ಬೋಸ್ ಅವರ ಕುಟುಂಬದ ಮೇಲೆ ಮಾಜಿ ಪ್ರಧಾನಿ ಜವಹಾರ್ ಲಾಲ್ ನೆಹರು ಬೇಹುಗಾರಿಕೆ ನಡೆಸಿದ್ದರು ಎಂಬ ವರದಿಯ ಬಗ್ಗೆ ತನಿಖೆ ನಡೆಸುವುದಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ.
ಗೃಹಖಾತೆಯ ರಾಜ್ಯ ಸಚಿವ ಹರಿಭಾಯ್ ಪಾರ್ಥಿಭಾಯ್ ಚೌಧರಿ ಅವರು ಮಂಗಳವಾರ ಲೋಕಸಭೆಗೆ ಈ ಬಗ್ಗೆ ತಿಳಿಸಿದ್ದು, ಬೇಹುಗಾರಿಕೆಯ ಬಗ್ಗೆ ತನಿಖೆ ನಡೆಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದಿದ್ದಾರೆ.
ಅಲ್ಲದೇ, ಖೋಸ್ಲಾ ಹಾಗೂ ಮುಖರ್ಜಿ ಆಯೋಗಗಳ ವರದಿಗಳೂ ಸೇರಿದಂತೆ ನೇತಾಜಿ ಅವರಿಗೆ ಸಂಬಂಧಿಸಿದ ಹಲವು ದಾಖಲೆಗಳನ್ನು ಈಗಾಗಲೇ ಬಹಿರಂಗಪಡಿಸಲಾಗಿದೆ. ಅವುಗಳನ್ನು ರಾಷ್ಟ್ರೀಯ ಪತ್ರಾಗಾರಕ್ಕೆ ಕಳುಹಿಸಲಾಗಿದೆ. ಅದಾಗ್ಯೂ ನೇತಾಜಿ ಅವರಿಗೆ ಸಂಬಂಧಿಸಿದ ಕೆಲವು ರಹಸ್ಯ ದಾಖಲೆಗಳು ಪಶ್ಚಿಮ ಬಂಗಾಳ ಸರ್ಕಾರದ ಬಳಿ ಹಾಗೂ ಇನ್ನೂ ಕೆಲವು ಕೇಂದ್ರ ಸರ್ಕಾರದ ಬಳಿ ಇವೆ ಎಂದು ಅವರು ಮಾಹಿತಿ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.