ಮುಂಬಯಿ: 2002ರ ಹಿಟ್ ಆಂಡ್ ರನ್ ಪ್ರಕರಣದಲ್ಲಿ ನಟ ಸಲ್ಮಾನ್ ಖಾನ್ ಅವರು ಅಪರಾಧಿ ಎಂದು ಮುಂಬಯಿಯ ಸ್ಥಳೀಯ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.
ತೀರ್ಪು ಪ್ರಕಟಿಸಿದ ನ್ಯಾಯಾಧೀಶ ಡಿ.ಡಬ್ಲ್ಯೂ ದೇಶಪಾಂಡೆ ‘ಸಲ್ಮಾನ್ ಅವರು ಕುಡಿತದ ಪ್ರಭಾವದಿಂದ, ಪರವಾನಗಿ ಇಲ್ಲದೇ ಅತಿ ವೇಗದಲ್ಲಿ ಅಜಾಗರೂಕತೆಯಿಂದ ವಾಹನ ಚಲಾಯಿಸಿರುವುದು ಸಾಬೀತಾಗಿದೆ’ ಎಂದು ಹೇಳಿದ್ದಾರೆ.
ಈ ಪ್ರಕರಣದಲ್ಲಿ ಸಲ್ಮಾನ್ ವಿರುದ್ಧ ಮಾಡಲಾಗಿರುವ ಎಲ್ಲಾ ಆರೋಪಗಳು ಸಾಬೀತಾಗಿರುವ ಹಿನ್ನಲೆಯಲ್ಲಿ ಅವರು ಅಪರಾಧಿ ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಇದೊಂದು ಉದ್ದೇಶರಹಿತ ಮಾನವ ಹತ್ಯೆ ಆಗಿರುವ ಕಾರಣ ಅವರಿಗೆ ಕನಿಷ್ಠ ಹತ್ತು ವರ್ಷ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆಗಳಿವೆ.
2002ರಲ್ಲಿ ಸಲ್ಮಾನ್ ಕುಡಿದು ನಡೆಸಿದ ಅನಾಹುತದಲ್ಲಿ ಅಪಘಾತದಲ್ಲಿ ಒಬ್ಬರು ಮೃತಪಟ್ಟಿದ್ದರು. ಇಬ್ಬರಿಗೆ ಗಾಯಗಳಾಗಿತ್ತು. ಇದೀಗ 13 ವರ್ಷಗಳ ನಿರಂತರ ಕಾನೂನು ಪ್ರಕ್ರಿಯೆಯ ಬಳಿಕ ಸಲ್ಮಾನ್ ಅಪರಾಧಿ ಎಂದು ಸಾಬೀತಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.