ನವದೆಹಲಿ: ನೇತಾಜಿ ಸುಭಾಷ್ಚಂದ್ರ ಬೋಸ್ ಅವರ 120ನೇ ಜನ್ಮದಿನವಾದ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ನೇತಾಜಿ ಅವರಿಗೆ ಗೌರ ಸಲ್ಲಿಸಿದ್ದಾರೆ.
ನೇತಾಜಿ ಸುಭಾಷ್ಚಂದ್ರ ಬೋಸ್ ಅವರು ಬ್ರಿಟಿಷರ ವಸಾಹತುಶಾಹಿ ಆಡಳಿತದಿಂದ ಭಾರತಕ್ಕೆ ವಿಮುಕ್ತಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಭಾರತದಲ್ಲಿನ ಬಡವರು ಹಾಗೂ ಸಮಾಜದ ಹಿಂದುಳಿದ ವರ್ಗದ ಜನರ ಏಳಿಗೆಗಾಗಿ ಶ್ರಮಿಸಿದ ಮಹಾನ್ ವ್ಯಕ್ತಿಯಾಗಿದ್ದರು ಎಂದು ಈ ವೇಳೆ ಟ್ವೀಟ್ ಮೂಲಕ ಪ್ರಧಾನಿ ಮೋದಿ ಅವರು ಹೇಳಿದ್ದಾರೆ.
ದಶಕಗಳಿಂದ ಉಳಿದಿದ್ದ ನೇತಾಜಿ ಅವರಿಗೆ ಸಂಬಂಧಿಸಿದ ಹಲವು ದಾಖಲೆಗಳನ್ನು ಬಹಿರಂಗಪಡಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಚಾರ ಎಂದು ಪ್ರಧಾನಿ ಮೋದಿ ಅವರು ಈ ವೇಳೆ ಟ್ವೀಟ್ ಮೂಲಕ ಹೇಳಿದ್ದಾರೆ.
ನೇತಾಜಿ ಅವರಿಗೆ ಸಂಬಂಧಿಸಿದ ದಾಖಲೆಗಳು ವೆಬ್ಸೈಟ್ನಲ್ಲಿ ಲಭ್ಯವಿದೆ.
ನೇತಾಜಿ ಅವರು ಒಬ್ಬ ಕಟ್ಟಾ ರಾಷ್ಟ್ರೀಯತಾವಾದಿ ಹಾಗೂ ದೇಶಭಕ್ತರಾಗಿದ್ದು, ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು ಎಂದು ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವ ಎಂ. ವೆಂಕಯ್ಯ ನಾಯ್ಡು ಅವರು ಹೇಳಿದ್ದಾರೆ.
ಬೋಸ್ ಅವರು ಜ.23, 1897ರಂದು ಒಡಿಸಾದ ಕಟಕ್ನಲ್ಲಿ ಜನಿಸಿದ್ದರು.
ನೇತಾಜಿ ಅವರ ಜನ್ಮದಿನದ ಸಂಬಂಧ ದೆಹಲಿಯ ಸಂಸತ್ ಭವನದಲ್ಲಿ ಪುಷ್ಪ ನಮನ ಸಲ್ಲಿಸಲಾಗುವುದು.
ದೇಶದ ವಿವಿಧ ಭಾಗಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.