ಹುಬ್ಬಳ್ಳಿ : ನವಲಗುಂದದಲ್ಲಿ ಮಹದಾಯಿ ಹೋರಾಟ ತೀವ್ರಗೊಂಡಿದ್ದು, ರೈತರು ಹಾಗೂ ಹೋರಾಟಗಾರರಿಗೆ ಪೊಲೀಸರು ಅನಗತ್ಯವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಇಂದು ಜೈಲ್ಭರೋ ಚಳವಳಿ ನಡೆಸಿದರು.
ಸರ್ಕಾರದ ವಿರುದ್ಧ ಘೋಷಣೆ ಕೂಗಿದ ರೈತರು ಸ್ವಯಂ ಬಂಧನಕ್ಕೊಳಗಾದರು.
ಹುಬ್ಬಳ್ಳಿ ಹಾಗೂ ಇತರೆಡೆಯಿಂದ ನವಲಗುಂದವನ್ನು ರೈತರು ತಲುಪದಂತೆ ತಡೆದಿದ್ದಾರೆ. 20ಕ್ಕೂ ಹೆಚ್ಚು ಜನರನ್ನು ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ನವಲಗುಂದದ ಬಹಿರಂಗ ಸಭೆಯಲ್ಲಿ ಮಾತನಾಡಿದ ಹೋರಾಟಗಾರ ಲೋಕನಾಥ ಹೆಬಸೂರ, ವಿನಾಕಾರಣ ಪೊಲೀಸರು ರೈತರಿಗೆ ಕಿರುಕುಳ ನೀಡುತ್ತಿದ್ದಾರೆ. ಸುಳ್ಳು ಮೊಕದ್ದಮೆ ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿದರು.
ಸ್ವಾಮೀಜಿ ಬೆಂಬಲ
ನವಲಗುಂದದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಗದಗ ತೋಂಟದಾರ್ಯ ಶ್ರೀ ಹಾಗೂ ಮಣಕವಾಡದ ಶ್ರೀ ಸಿದ್ದರಾಮದೇವರು ಬೆಂಬಲ ಸೂಚಿಸಿ, ಪ್ರತಿಭಟನೆಯಲ್ಲೂ ಪಾಲ್ಗೊಂಡಿದ್ದರು.
ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.