ಚೆನ್ನೈ: ತಮಿಳುನಾಡಿನ ಕೂಡಂಕುಳಂ ಪರಮಾಣು ವಿದ್ಯುತ್ ಸ್ಥಾವರದ ಎರಡನೇ ಘಟಕದಲ್ಲಿ ವಾಣಿಜ್ಯ ವಿದ್ಯುತ್ ಉತ್ಪಾದನೆ ಶೀಘ್ರದಲ್ಲೇ ಕಾರ್ಯಾರಂಭಗೊಳ್ಳಲಿದೆ ಎಂದು ಪ್ರದೇಶ ನಿರ್ದೇಶಕ ಆರ್.ಎಸ್. ಸುಂದರ್ ಹೇಳಿದ್ದಾರೆ.
ಕೂಡಂಕುಳಂ ಸ್ಥಾವರದ ಎರಡನೇ ಘಟಕ 1000 ಮೆಗಾ ವ್ಯಾಟ್ ಸಂಪೂರ್ಣ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ವಾಣಿಜ್ಯ ವಿದ್ಯುತ್ ಉತ್ಪಾದನೆ ಒಂದು ಐತಿಹಾಸಿಕ ಕ್ಷಣವಾಗಿರಿಲಿದೆ ಎಂದು ಅವರು ಹೇಳಿದ್ದಾರೆ.
ಕೂಡಂಕುಳಂ ಸ್ಥಾವರದ ಮೊದಲ ಘಟಕದಲ್ಲಿ ಈವರೆಗೆ 13,197 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದಿಸಲಾಗಿದ್ದು, 1000 ಕೋಟಿ ರೂ. ಆದಾಯ ಪಡೆಯುತ್ತಿದೆ.
1988ರ ನವೆಂಬರ್ನಲ್ಲಿ ರಷ್ಯಾದ ತಂತ್ರಜ್ಞರ ಸಹಾಯದಿಂದ 1000 ಮೆಗಾ ವ್ಯಾಟ್ನ ಕೂಡಂಕುಳಂ ಪರಮಾಣು ಸ್ಥಾವರವನ್ನು ನಿರ್ಮಿಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.