ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಲಾಲಾ ಲಜಪತ್ ರಾಯ್ ಅವರ 151 ನೇ ಜನ್ಮದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಲಾಲಾ ಲಜಪತ್ ರಾಯ್ ಅವರಿಗೆ ಗೌರವಾರ್ಪಣೆ ಸಲ್ಲಿಸಿದ್ದಾರೆ.
‘ಲಾಲಾ ಲಜಪತ್ ರಾಯ್ ಅವರ ಜನ್ಮದಿನದಂದು ನಮನಗಳು. ನಿರ್ಭಯತೆ, ಸಮಗ್ರತೆ ಮತ್ತು ಅನ್ಯಾಯದ ವಿರುದ್ಧ ಹೋರಾಡುವ ವ್ಯಕ್ತಿತ್ವವನ್ನು ಹೊಂದಿದ್ದ ಲಾಲಾ ಲಜಪತ್ ರಾಯ್ ಅವರನ್ನು ಇಂದು ಸ್ಮರಿಸುತ್ತೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
Tributes to Lala Lajpat Rai on his birth anniversary. He was respected for his fearlessness, impeccable integrity & fight against injustice.
— Narendra Modi (@narendramodi) January 28, 2017
ಸ್ವಾತಂತ್ರ್ಯ ಹೋರಾಟಗಾರ ಲಾಲಾ ಲಜಪತ್ ರಾಯ್ ಅವರು ತಾಯ್ನಾಡಿಗಾಗಿ ಅವಿರತವಾಗಿ ದುಡಿದ ನಾಯಕ. ಪಂಜಾಬಿನ ಸಿಂಹ ಲಾಲಾ ಲಜಪತ್ ರಾಯ್ ರಾಷ್ಟ್ರಕ್ಕೆ ಕಲಿಸಿಕೊಟಿದ್ದು ಧೈರ್ಯದ ಪಾಠ.
ಪಂಜಾಬ್ ಕೇಸರಿ ಲಾಲಾ ಲಜಪತ್ ರಾಯ್ ಅವರು ಮೋಗಾ ಜಿಲ್ಲೆಗೆ ಸೇರಿದ ಧುಡಿಕೆ ಎಂಬ ಗ್ರಾಮದಲ್ಲಿ ಜನವರಿ 28, 1865ರ ವರ್ಷದಲ್ಲಿ ಜನಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.