ನವದೆಹಲಿ: ಭೂಗತ ಪಾತಕಿ ಎಲ್ಲಿದ್ದಾನೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಬುಧವಾರ ಸಂಸತ್ತಿನಲ್ಲಿ ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ಅವರು ಸರ್ಕಾರವನ್ನು ಆಗ್ರಹಿಸಿದರು.
ಮಂಗಳವಾರ ಲೋಕಸಭೆಯಲ್ಲಿ ಗೃಹಖಾತೆ ರಾಜ್ಯಸಚಿವ ಹರಿಭಾಯ್ ಪಾರ್ಥಿಭಾಯ್ ಚೌಧರಿ ಅವರು, ದಾವೂದ್ ಎಲ್ಲಿದ್ದಾನೆಂದು ತಿಳಿದಿಲ್ಲ, ಆತನಿರುವ ಜಾಗ ತಿಳಿದೊಡನೆ ಆತನ ಬಂಧಿಸಲು ಪ್ರಯತ್ನ ನಡೆಸುತ್ತೇವೆ ಎಂದು ಹೇಳಿದ್ದರು.
ಆದರೆ ಸಂಸತ್ತಿನ ಹೊರಗಡೆ ಸಚಿವ ಕಿರನ್ ರಿಜ್ಜು ಅವರು, ದಾವೂದ್ ಪಾಕಿಸ್ಥಾನದಲ್ಲೇ ಇದ್ದಾನೆ ಎಂಬ ಹೇಳಿಕೆ ನೀಡಿದ್ದರು.
ಈ ಎರಡು ಗೊಂದಲಮಯ ಹೇಳಿಕೆ ಇಂದು ಲೋಕಸಭೆಯಲ್ಲಿ ಭಾರೀ ಗದ್ದಲಕ್ಕೆ ಕಾರಣವಾಯಿತು.
ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿದ್ದು, ಅಲ್ಲಿಂದಲೇ ದುಷ್ಕೃತ್ಯಗಳನ್ನು ನಿರ್ವಹಿಸುತ್ತಿದ್ದಾನೆ ಎಂದು ಭಾರತ ಸರ್ಕಾರ ಹೇಳಿಕೊಂಡು ಬಂದಿತ್ತು. ಚುನಾವಣೆಯ ವೇಳೆ ಆತನನ್ನು ಹಿಡಿಯಲು ನಾವು ವಿಫಲಗೊಂಡಿದ್ದೇವೆ ಎಂದು ಟೀಕಿಸಲಾಗಿತ್ತು. ಆದರೆ ದಾವೂದ್ ಎಲ್ಲಿದ್ದಾನೆ ಗೊತ್ತಿಲ್ಲ ಎಂದು ಸರ್ಕಾರ ಲೋಕಸಭೆಯಲ್ಲಿ ಲಿಖಿತ ಹೇಳಿಕೆ ನೀಡಿದೆ. ಇದರಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆ ಹಾಳಾಗಿದೆ. ಈವರೆಗೂ ನಾವು ದಾವೂದ್ ಪಾಕಿಸ್ತಾನದಲ್ಲಿದ್ದಾನೆ ಎಂದು ಹೇಳುತ್ತ ಬಂದಿದ್ದೇವೆ. ಇದೀಗ ಆತ ಎಲ್ಲಿದ್ದಾನೆ ನಮಗೆ ಗೊತ್ತಿಲ್ಲ ಎನ್ನುವುದು ತುಂಬ ತಪ್ಪು’ ಎಂದು ಆಜಾದ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.