ಮಂಗಳೂರು : ಹಿಂದೂಸ್ಥಾನಿ ಸಂಗೀತ ಲೋಕದ ದಿಗ್ಗಜ ಪಂಡಿತ್ ಭೀಮಸೇನ್ ಜೋಷಿಯವರ ಶಿಷ್ಯ ಹಾಗೂ ಮಂಗಳೂರು ನಗರದಲ್ಲಿ ಹುಟ್ಟಿ ಪುಣೆಯಲ್ಲಿ ನೆಲೆಸಿ ಪ್ರಸಿದ್ಧಿ ಪಡೆದಿರುವ ಪಂಡಿತ್ ಉಪೇಂದ್ರ ಭಟ್ ಇವರಿಗೆ ಮಹಾರಾಷ್ಟ್ರ ಸರ್ಕಾರ ಕೊಡಮಾಡುವ ಪ್ರತಿಷ್ಠಿತ “ಸಾಂಸ್ಕೃತಿಕ ಪ್ರಶಸ್ತಿ -2016” ಲಭಿಸಿರುವುದು ಅತ್ಯಂತ ಸಂತೋಷವನ್ನು ನೀಡಿದೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ತಿಳಿಸಿದ್ದಾರೆ.
2008 ರಲ್ಲಿ ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದ ಇವರು ಹಿಂದೂಸ್ಥಾನಿ ಸಂಗೀತ ಕ್ಷೇತ್ರದಲ್ಲಿ ಮಾಡಿದ ಸಾಧನೆ ಅಮೋಘವಾದುದು. ದೇಶ ವಿದೇಶಗಳಲ್ಲಿ ಸಂಗೀತ ಕಛೇರಿಗಳನ್ನು ನಡೆಸಿ ಪ್ರಸಿದ್ಧಿ ಪಡೆದಿರುವ ಇವರು ರಾಜ್ಯದ ಇತಿಹಾಸದಲ್ಲೇ ಈ ಪ್ರಶಸ್ತಿ ಪಡೆದ ಮೊದಲಿಗರಾಗಿದ್ದಾರೆ. ಈ ಸಂದರ್ಭದಲ್ಲಿ ಅವರನ್ನು ಅಭಿನಂದಿಸುತ್ತಾ ಈ ಪ್ರಶಸ್ತಿಯಿಂದ ಸಂಗೀತ ಕ್ಷೇತ್ರಕ್ಕೆ ಇನ್ನಷ್ಟು ಕೊಡುಗೆ ನೀಡುವ ಪ್ರೇರಣೆ ದೊರೆಯಲಿ ಎಂದು ಪ್ರಕಟಣೆ ಮೂಲಕ ಶುಭ ಹಾರೈಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.