ಹರಿದ್ವಾರ: ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದ್ದು, ಎಂದಿಗೂ ಅವಿಭಾಜ್ಯ ಅಂಗವಾಗಿಯೇ ಉಳಿಯಲಿದೆ. ಅದನ್ನು ಯಾವ ಶಕ್ತಿಯಿಂದಲೂ ಬದಲಾಯಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.
ಹರಿದ್ವಾರದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯೊಂದರಲ್ಲಿ ಮಾತನಾಡಿರುವ ಅವರು, ಭಾರತದೊಂದಿಗೆ ವಿಲೀನಗೊಳ್ಳಬೇಕೋ ಅಥವಾ ಬೇಡವೋ ಎಂಬುದರ ಕುರಿತಂತೆ ಪಾಕಿಸ್ತಾನ ಮೊದಲು ತನ್ನ ರಾಷ್ಟ್ರದ ಜನತೆಯ ಅಭಿಪ್ರಾಯಗಳನ್ನು ಸಂಗ್ರಹಿಸಬೇಕಿದೆ ಎಂದಿದ್ದಾರೆ.
ಭಾರತ ಹಾಗೂ ಪಾಕಿಸ್ಥಾನ ಎರಡೂ ರಾಷ್ಟ್ರಗಳ ಸಂಬಂಧ ಹದಗೆಟ್ಟಿದೆ. ಪಾಕಿಸ್ಥಾನಕ್ಕೆ ಒಂದನ್ನು ಹೇಳಲು ಇಚ್ಛಿಸುತ್ತೇನೆ. ಭಾರತ ಎಂದಿಗೂ ಶಾಂತಿಯುತ ದ್ವಿಪಕ್ಷೀಯ ಸಂಬಂಧವನ್ನು ಬಯಸುತ್ತದೆ. ಆದರೆ, ಈ ಸಂಬಂಧವನ್ನು ಇಸ್ಲಾಮಾಬಾದ್ ಹಾಳು ಮಾಡುತ್ತಲೇ ಬಂದಿದೆ. ಪಾಕಿಸ್ಥಾನ ಮೊದಲು ಪ್ರಚೋದನೆ ನೀಡುತ್ತಿರುವ ತನ್ನ ಭಯೋತ್ಪಾದನೆ ನಿಲ್ಲಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಸೀಮಿತ ದಾಳಿ ನಡೆಸುವ ಮೂಲಕ ನಾವೂ ಕೂಡ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬಲ್ಲೆವು ಎಂಬುದನ್ನು ಭಾರತ ಇಡೀ ವಿಶ್ವಕ್ಕೆ ತೋರಿಸಿದೆ. ಭಾರತ ಶಾಂತಿಯನ್ನು ಪ್ರೀತಿಸುವ ದೇಶವಾಗಿದೆ. ಭಾರತ ವಿರುದ್ಧ ಷಡ್ಯಂತ್ರ ರೂಪಿಸುವವರನ್ನು ನಾವು ಸುಮ್ಮನೆ ಬಿಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.