ನವದೆಹಲಿ: ಭಾರತದ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರಿಗೆ ಕರೆ ಮಾಡಿ ಮಾತನಾಡಿರುವ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಜೇಮ್ಸ್ ಮ್ಯಾಟಿಸ್ ಉಭಯ ದೇಶಗಳ ನಡುವಿನ ರಕ್ಷಣಾ ಸಂಬಂಧದ ವೃದ್ಧಿಯ ಕುರಿತು ಮಾತನಾಡಿದ್ದಾರೆ.
ಟ್ರಂಪ್ ಅಧಿಕಾರವಹಿಸಿಕೊಂಡ ಮೇಲೆ ಅಮೆರಿಕದ ರಕ್ಷಣಾ ಕಾರ್ಯದರ್ಶಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಈ ಇಬ್ಬರ ನಡುವೆ ನಡೆದ ಮೊದಲ ಸಂಭಾಷಣೆ ಇದಾಗಿದೆ.
ಇತ್ತೀಚೆಗಿನ ವರ್ಷದಲ್ಲಿ ಭಾರತ ಹಾಗೂ ಅಮೆರಿಕದ ರಕ್ಷಣಾ ಸಹಕಾರಕ್ಕೆ ಸಂಬಂಧಿಸಿದಂತೆ ಮಹತ್ತರ ಪ್ರಗತಿಯಾಗಿವೆ. ಜಾಗತಿಕ ಶಾಂತಿ ಹಾಗೂ ಭದ್ರತೆಗೆ ಸಂಬಂಧಿಸಿದಂತೆ ಭಾರತದ ಪಾತ್ರ ಮಹತ್ವದ್ದಾಗಿದೆ. ಇದೇ ರೀತಿಯ ದ್ವಿಪಕ್ಷೀಯ ರಕ್ಷಣಾ ಸಂಬಂಧವನ್ನು ಕಾಯ್ದುಕೊಂಡು ಹೋಗುವಲ್ಲಿ ಬದ್ಧರಿರುವುದಾಗಿ ಜೇಮ್ಸ್ ಮ್ಯಾಟಿಸ್ ಅವರು ಪರಿಕ್ಕರ್ ಅವರೊಂದಿಗಿನ ಮೊದಲ ಸಂಭಾಷಣೆಯಲ್ಲಿ ಹೇಳಿದ್ದಾರೆ ಎಂದು ಪೆಂಟಗಾನ್ ಪ್ರೆಸ್ ಸೆಕ್ರೆಟರಿ ಕ್ಯಾ.ಜೆಫ್ ಡೇವಿಸ್ ತಿಳಿಸಿದ್ದಾರೆ.
ರಕ್ಷಣಾ ಸಹಕಾರ ವೃದ್ಧಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ವ್ಯಾಪಾರ ವೃದ್ಧಿಯಲ್ಲಿ ಎರಡೂ ದೇಶಗಳ ನಾಯಕರೂ ಬದ್ಧರಿರುವುದಾಗಿ ಪರಸ್ಪರ ಹೇಳಿಕೊಂಡಿದ್ದಾರೆಂದು ಡೇವಿಸ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.