ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳು ಪಟ್ಟುಹಿಡಿದ ಹಿನ್ನಲೆಯಲ್ಲಿ ಶುಕ್ರವಾರ ರಾಜ್ಯಸಭೆಯಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ಇದರಿಂದಾಗಿ ಎರಡು ಬಾರಿ ಕಲಾಪವನ್ನು ಮುಂದೂಡಲಾಯಿತು.
ಗಡ್ಕರಿ ಅವರು ಸಿಎಜಿ ಆರೋಪವನ್ನು ಎದುರಿಸುತ್ತಿರುವ ಹಿನ್ನಲೆಯಲ್ಲಿ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಆಗ್ರಹಿಸಿವೆ.
ಗಡ್ಕರಿ ಅವರ ಸ್ಫೂರ್ತಿ ಸಕ್ಕರೆ ಕಾರ್ಖಾನೆಗೆ ಭಾರತೀಯ ಮರುಬಳಕೆ ಇಂಧನ ಅಭಿವೃದ್ಧಿ ಸಂಸ್ಥೆ (ಐಆರ್ಇಡಿಎ)ಯು ಹಣಕಾಸು ಮಾರ್ಗಸೂಚಿಯನ್ನು ಉಲ್ಲಂಘಿಸಿ ರೂ. 48.65ಕೋಟಿ ಸಾಲ ಮಂಜೂರು ಮಾಡಿದೆ ಎಂದು ಸಿಎಜಿ ತನ್ನ ವರದಿಯಲ್ಲಿ ಆರೋಪಿಸಿದೆ. ಆದರೆ ಈ ಆರೋಪವನ್ನು ಗಡ್ಕರಿ ನಿರಾಕರಿಸಿದ್ದಾರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.