ಥಾಣೆ: ಆರ್ಎಸ್ಎಸ್ ವಿರುದ್ಧ ಹೇಳಿಕೆ ನೀಡಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಪ್ರಕರಣದ ವಿಚಾರಣೆಗೆ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾದರು.
ಮಹಾರಾಷ್ಟ್ರದ ಭಿವಂಡಿ ನ್ಯಾಯಾಲಯದ ಮುಂದೆ ಅವರು ಹಾಜರಾದರು. 15 ನಿಮಿಷಗಳ ಕಾಲ ನ್ಯಾಯಾಲಯದಲ್ಲಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನ್ಯಾಯಾಲಯಕ್ಕೆ ಗೌರವ ಸಲ್ಲಿಸುವ ದೃಷ್ಟಿಯಿಂದ ಬಂದಿದ್ದೇನೆ’ ಎಂದರು.
ಕೋರ್ಟ್ ಮುಂದಿನ ವಿಚಾರಣೆಯನ್ನು ಸೆಪ್ಟಂಬರ್ 20ಕ್ಕೆ ಮುಂದೂಡಿದೆ. ನಿನ್ನೆಯಷ್ಟೇ ಸುಪ್ರೀಂಕೋರ್ಟ್ ಅವರ ವಿರುದ್ಧದ ಪ್ರಕರಣದ ವಿಚಾರಣೆಗೆ ತಡೆ ನೀಡಿತ್ತು.
ಗಾಂಧೀಜಿ ಹತ್ಯೆಗೆ ಆರ್ಎಸ್ಎಸ್ ಕಾರಣ ಎಂದು ರಾಹುಲ್ ಚುನಾವಣಾ ಸಮಾವೇಶವೊಂದರಲ್ಲಿ ಹೇಳಿಕೆ ನೀಡಿದ್ದರು. ಈ ಹಿನ್ನಲೆಯಲ್ಲಿ ರಾಜೇಶ್ ಕುಂಟೆ ಎಂಬುವವರು ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.