ನವದೆಹಲಿ: ಸದ್ಯದಲ್ಲೇ ಆರ್ಬಿಐ ಹೊಸ ವಿನ್ಯಾಸದ 1000 ರೂ.ಗಳನ್ನು ಬಿಡುಗಡೆ ಮಾಡಲಿದೆ ಎನ್ನುವ ಸುದ್ದಿಗೆ ಪ್ರತಿಕ್ರಿಯಿಸಿದ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ ದಾಸ್ ಹೊಸ ಸರಣಿಯ 1000 ರೂ. ಮುಖ ಬೆಲೆಯ ನೋಟುಗಳನ್ನು ಪರಿಚಯಿಸುವ ಯಾವುದೇ ಯೋಜನೆಗಳಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
No plans to introduce ₹1000 notes. Focus is on production and supply of ₹500 and lower denomination notes.
— Shaktikanta Das (@DasShaktikanta) February 22, 2017
ಸರಕಾರದ ಪ್ರಾಥಮಿಕ ಗಮನವು ರೂ.500 ಮತ್ತು ಕಡಿಮೆ ಮುಖಬೆಲೆಯ ನೋಟುಗಳ ಉತ್ಪಾದನೆ ಮತ್ತು ಪೂರೈಕೆಯ ಮೇಲಿದೆ ಎಂದು ಅವರು ಹೇಳಿದ್ದಾರೆ.
ಮಾಧ್ಯಮಗಳ ವರದಿ ಪ್ರಕಾರ, ಒರ್ವ ಹಿರಿಯ ಸರ್ಕಾರಿ ಅಧಿಕಾರಿ ತಿಳಿಸಿರುವಂತೆ ಆರ್ಬಿಐ ಮತ್ತು ಕೇಂದ್ರ ಸರ್ಕಾರ ಹೊಸ 1000 ರೂ. ಮುಖಬೆಲೆಯ ನೋಟುಗಳನ್ನು ಬಿಡುಗಡೆ ಮಾಡುವ ಯೋಜನೆ ಹೊಂದಿವೆ ಆದರೆ ಯಾವಾಗ ಎಂಬುದು ಸ್ಪಷ್ಟವಾಗಿಲ್ಲ. ಜನವರಿಯ ಪ್ರಾರಂಭದಲ್ಲಿ ಹೊಸ 1000 ರೂ ನೋಟುಗಳನ್ನು ಪರಿಚಯಿಸುವ ಯೋಜನೆಯಿತ್ತು ಆದರೆ 500 ಮತ್ತು ಕಡಿಮೆ ಮುಖಬೆಲೆಯ ನೋಟುಗಳ ಉತ್ಪಾದನೆ ಮತ್ತು ಪೂರೈಕೆಯಲ್ಲಿ ಈ ನಿರ್ಧಾರ ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.