ನವದೆಹಲಿ: ದೇಶದ ಅತೀದೊಡ್ಡ ರಾಜ್ಯ ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯ ಫಲಿತಾಂಶ ಮಾ.11ರಂದು ಪ್ರಕಟವಾಗಲಿದೆ. ಆದರೆ ಚುನಾವಣೋತ್ತರ ಸಮೀಕ್ಷೆಗಳು ಈಗಾಗಲೇ ಬಹಿರಂಗಗೊಂಡಿದ್ದು, ಬಿಜೆಪಿ ಮೇಲುಗೈ ಸಾಧಿಸಲಿದೆ ಎಂಬುದಾಗಿ ಹೇಳಿವೆ.
ಟೈಮ್ಸ್ ನೌ-ವಿಎಂಆರ್ ಸಮೀಕ್ಷೆ ಬಿಜೆಪಿ 190-210ಸ್ಥಾನ ಪಡೆಯಲಿದೆ ಎಂದಿದೆ. ಎಬಿಪಿ-ಲೋಕನೀತಿ ಸಮೀಕ್ಷೆ ಬಿಜೆಪಿ 164-179 ಸ್ಥಾನ ಪಡೆಯಲಿದೆ ಎಂದಿದೆ.
ಉತ್ತರಪ್ರದೇಶದಲ್ಲಿ ಬಿಜೆಪಿ ಏಕೈಕ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಸ್ವತಂತ್ರವಾಗಿ ಸರ್ಕಾರ ರಚಿಸಲು ಅದಕ್ಕೆ ಸಾಧ್ಯವಾಗದು ಎಂದು ಈ ಸಮೀಕ್ಷೆಗಳಿಂದ ತಿಳಿದು ಬಂದಿದೆ.
ಉತ್ತರಾಖಂಡದಲ್ಲೂ ಬಿಜೆಪಿ ಅಧಿಕಾರದ ಗದ್ದುಗೆ ಏರಲಿವೆ ಎಂಬುದಾಗಿ ಈ ಸಮೀಕ್ಷೆಗಳು ಹೇಳಿವೆ. ಗೋವಾದಲ್ಲೂ ಬಿಜೆಪಿ ಮೇಲುಗೈ ಸಾಧಿಸುವ ಸಾಧ್ಯತೆ ಇದೆ. ಆದರೆ ಬಹುಮತ ಸಿಗುವುದು ಅನುಮಾನ ಎನ್ನಲಾಗಿದೆ.
117 ಸ್ಥಾನಗಳುಳ್ಳ ಪಂಜಾಬ್ನಲ್ಲಿ ಕಾಂಗ್ರೆಸ್ 62-71 ಸ್ಥಾನ ಪಡೆದು ಸರಳ ಬಹುಮತ ಪಡೆಯುವ ಸಾಧ್ಯತೆ ಇದೆ ಎಂದಿದೆ. ಮಣಿಪುರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸಮಬಲ ಸಾಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.