ನವದೆಹಲಿ: ಗಡಿ ಪ್ರದೇಶದ ಜನರ ಬಗ್ಗೆ ಸಾಮಾಜಿಕ ಜವಾಬ್ದಾರಿ ಈಡೇರಿಸುವ, ಸೇವೆ ಸಲ್ಲಿಸುತ್ತಿರುವ ಹಾಗೂ ನಿವೃತ್ತ ಸಿಬ್ಬಂದಿಗಳು ಮತ್ತು ಅವರ ಕುಟುಂಬದ ಕಲ್ಯಾಣಕ್ಕಾಗಿ ಸಶಸ್ತ್ರ ಸೀಮಾ ಬಲ್ (ಎಸ್ಎಸ್ಬಿ), ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಧಿ ಒಪ್ಪಂದ ಮಾಡಿಕೊಂಡಿದೆ.
ಎಸ್ಎಸ್ಬಿ ಪಡೆಯ ಕೇಂದ್ರ ಕಚೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯಮ ಕೇಂದ್ರ ಸಚಿವ ರಾಜೀವ್ ಪ್ರತಾಪ್ ರೂಡಿ ಹಾಗೂ ಕೇಂದ್ರದ ರಾಜ್ಯ ಗೃಹ ಸಚಿವ ಕಿರಣ್ ರಿಜಿಜು ಉಪಸ್ಥಿತಿಯಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಎಸ್ಎಸ್ಬಿ ಮುಖ್ಯ ನಿರ್ದೇಶಕಿ, , ಪಿಎಸ್ ಅಧಿಕಾರಿ ಅರ್ಚನಾ ರಾಮಸುಂದರಂ ಎಸ್ಎಸ್ಬಿ ಪರ ಒಪ್ಪಂದಕ್ಕೆ ಸಹಿ ಹಾಕಿದರು.
ಸಮಾರಂಭದ ಸಂದರ್ಭದಲ್ಲಿ ಕಿರಣ್ ರಿಜಿಜು ಅವರು ಆಂತರಿಕವಾಗಿ ಅಭಿವೃದ್ಧಿಪಡಿಸಲಾದ ಮೊಬೈಲ್ ಅಪ್ಲಿಕೇಶನ್ ‘ಮೈಎಸ್ಎಸ್ಬಿ’ ಬಿಡುಗಡೆ ಮಾಡಿದರು. ಈ ಆ್ಯಪ್ ಅಭಿವೃದ್ಧಿಪಡಿಸಿದ ಇನ್ಸ್ಪೆಕ್ಟರ್ (ಮಂತ್ರಿ) ಗೌತಮ್ ಬಾಸಕ್ ಅವರನ್ನು ರಿಜಿಜು ಪ್ರಶಂಸಿಸಿದರು.
ಈ ಒಪ್ಪಂದದ ಸಹಿಯೊಂದಿಗೆ ಎಸ್ಎಸ್ಬಿ ಅವಲಂಬಿತ ಸಿಬ್ಬಂದಿಗಳು ಹಾಗೂ ಸ್ಥಳೀಯರು, ಅರ್ಧದಲ್ಲಿ ಶಾಲೆ ಬಿಟ್ಟವರು, ಮಾನವ ಕಳ್ಳಸಾಗಣೆ, ಸಂತ್ರಸ್ತರು ಎಸ್ಎಸ್ಬಿಯಿಂದ ಲಾಭ ಪಡೆಯಲಿದ್ದಾರೆ.
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ಸಹಯೋಗದಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಆಯೋಜಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.