ಮಂಗಳೂರು : ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಬಿಜೆಪಿಯ ಅಭೂತಪೂರ್ವ ಜಯ ಕೇಂದ್ರ ಸರ್ಕಾರದ ಜನಪರ ಯೋಜನೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಸಂದ ಜಯವಾಗಿದೆ. ಕಾಂಗ್ರೆಸ್ ಪಕ್ಷವನ್ನು ಜನತೆ ಸ್ಪಷ್ಟವಾಗಿ ತಿರಸ್ಕರಿಸಿದ್ದು, ಮುಂದಿನ ವರ್ಷ ಕರ್ನಾಟಕದಲ್ಲೂ ಬಿಜೆಪಿ ಬಹುಮತ ಪಡೆಯುವುದು ನಿಶ್ಚಿತ ಎಂದು ದ.ಕ. ಸಂಸದ ನಳಿನ್ಕುಮಾರ್ ಕಟೀಲ್ ತಿಳಿಸಿದ್ದಾರೆ.
ಮೋದಿ ನಾಯಕತ್ವದಲ್ಲಿ ದೇಶದ ಪ್ರಗತಿಯನ್ನು ಜನತೆ ಮನಗಂಡಿದ್ದಾರೆ. ನೋಟು ನಿಷೇಧದ ನಿರ್ಧಾರಕ್ಕೂ ಮತದಾರರ ಬೆಂಬಲ ದೊರೆತಿದೆ. ಪ್ರಧಾನಿ ವಿರುದ್ಧ ವೈಯಕ್ತಿಕ ನಿಂದನೆ ಮಾಡಿದ ಮೈತ್ರಿಕೂಟದ ನಾಯಕರಿಗೆ ಉತ್ತರ ಭಾರತದ ಜನತೆ ತಕ್ಕ ಉತ್ತರ ನೀಡಿದ್ದಾರೆ. ಈ ಫಲಿತಾಂಶ ಕರ್ನಾಟಕದಲ್ಲಿ ಬಿಜೆಪಿ ಕಾರ್ಯಕರ್ತರ ಆತ್ಮವಿಶ್ವಾಸವನ್ನು ಇಮ್ಮಡಿಗೊಳಿಸಿದೆ. ಯಡಿಯೂರಪ್ಪ ಅವರು ಮುಂದಿನ ಮುಖ್ಯಮಂತ್ರಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.