ಮುಂಬರುವ ಸಾರ್ವತ್ರಿಕ ಚುನಾವಣೆಯ ದಿಕ್ಸೂಚಿ ಎಂದೇ ಪಂಚರಾಜ್ಯಗಳ ಚುನಾವಣಾ ಫಲಿತಾಂಶವನ್ನು ಪರಿಗಣಿಸಲಾಗಿದೆ. ಇದೀಗ ಉತ್ತರ ಪ್ರದೇಶ, ಉತ್ತರಾಖಂಡ್ನಲ್ಲಿ ಬಿಜೆಪಿ ಬಹುಮತ ಸಾಧಿಸಿದ್ದು, ಮಣಿಪುರ, ಗೋವಾದಲ್ಲಿ ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದೆ. ಪಂಜಾಬ್ ಕೈ ಪಾಲಾಗಿದೆ. ಈ ಹಿನ್ನೆಲೆಯಲ್ಲಿ ನ್ಯೂಸ್-13 ಕೆಲವು ರಾಜಕೀಯ ನಾಯಕರನ್ನು ಸಂಪರ್ಕಿಸಿದಾಗ ಬಂದ ಅಭಿಪ್ರಾಯಗಳು.
ನೋಟು ಅಮಾನ್ಯೀಕರಣಕ್ಕೆ ಬೆಂಬಲ
ಪ್ರಧಾನಿ ನರೇಂದ್ರ ಮೋದಿ ಅವರ ನೋಟು ಅಮಾನ್ಯೀಕರಣಕ್ಕೆ ಜನ ಬೆಂಬಲವಿದೆ ಎಂಬುದಕ್ಕೆ ಪಂಚರಾಜ್ಯಗಳ ಚುನಾವಣೆಯ ಫಲಿತಾಂಶವೇ ಸಾಕ್ಷಿ. ಉತ್ತರ ಪ್ರದೇಶದಲ್ಲಿ ಅಪವಿತ್ರ ಮೈತ್ರಿಗೆ ಜನ ತಕ್ಕ ಪಾಠ ಕಲಿಸಿದ್ದಾರೆ. ಉತ್ತರ ಪ್ರದೇಶದ ಅಭಿವೃದ್ಧಿಗೆ ಈ ಗೆಲುವು ಬಹು ಅನುಕೂಲವಾಗಿದೆ. ಇಡೀ ದೇಶದಲ್ಲಿಯೇ ಮೋದಿ ಹಾಗೂ ಬಿಜೆಪಿ ಅಲೆ ಇರುವಾಗ, ಕರ್ನಾಟಕದ ಉಪ ಚುನಾವಣೆಯ ಮೇಲೂ ಧನಾತ್ಮಕ ಪರಿಣಾಮ ಬೀರುವ ಸಾಧ್ಯತೆ ಖಚಿತ.
ಪ್ರಲ್ಹಾದ ಜೋಶಿ, ಸಂಸದರು,
ಧಾರವಾಡ ಲೋಕಸಭಾ ಕ್ಷೇತ್ರ (ಉತ್ತರ)
ದೇಶಾದ್ಯಂತ ಬಿಜೆಪಿ ಅಲೆ
ಇಡೀ ದೇಶದಾದ್ಯಂತ ಬಿಜೆಪಿ ಅಲೆ ಇದೆ. ಪ್ರಧಾನಿ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಜೋಡಿ ಮತ್ತೆ ಮೋಡಿ ಮಾಡಿದೆ. ಇದರಿಂದ ದೇಶಕ್ಕೆ ಒಳಿತಾಗಲಿದೆ. ಉತ್ತರಾಖಂಡದಲ್ಲೂ ಬಿಜೆಪಿಗೆ ಬಹುಮತ, ಗೋವಾ ಹಾಗೂ ಮಣಿಪುರದಲ್ಲೂ ಬಿಜೆಪಿಗೆ ಹಿನ್ನಡೆ ಏನೂ ಆಗಿಲ್ಲ. ಈ ನಿಟ್ಟಿನಲ್ಲಿ ನೋಡುವುದಾದರೆ ಇದೊಂದು ಮುಂಬರುವ ಚುನಾವಣೆಯ ದಿಕ್ಸೂಚಿ.
ಜಗದೀಶ ಶೆಟ್ಟರ್,
ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕರು, ವಿಧಾನ ಸಭೆ
ಅಭಿವೃದ್ಧಿ ಕೆಲಸಕ್ಕೆ ಆದ್ಯತೆ
ಪಂಚರಾಜ್ಯಗಳ ಚುನಾವಣೆಯ ಫಲಿತಾಂಶ ಗಮನಿಸಿದಾಗ ಜನ ಅಭಿವೃದ್ಧಿ ಕೆಲಸಕ್ಕೆ ಆದ್ಯತೆ ನೀಡಿದ್ದಾರೆ ಎನ್ನುವುದು ಸ್ಪಷ್ಟ. ಉತ್ತರ ಪ್ರದೇಶದಲ್ಲಿ 14 ವರ್ಷಗಳ ವನವಾಸ ಅಂತ್ಯವಾಗಿದೆ. ಮೋದಿ ಅವರ ಅಲೆಗೆ ವಿಪಕ್ಷಗಳು ಕೊಚ್ಚಿ ಹೋಗಿವೆ.
ಸುರೇಶ ಅಂಗಡಿ, ಸಂಸದರು
ಬೆಳಗಾವಿ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.