ನವದೆಹಲಿ: ಪಂಚರಾಜ್ಯಗಳ ಚುನಾವಣೆಯ ಪೈಕಿ ಪಂಜಾಬ್ನಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಪಕ್ಷ ಕಮಾಲ್ ಮಾಡಲಿದೆ ಎಂಬ ನಿರೀಕ್ಷೆ ಎಲ್ಲರಿಗೂ ಇತ್ತು.
ಇದೇ ನಿರೀಕ್ಷೆಯಲ್ಲಿ ಫಲಿತಾಂಶದ ದಿನ ಸಂಭ್ರಮಾಚರಣೆ ನಡೆಸಲು ಬೇಕಾದ ಎಲ್ಲಾ ತಯಾರಿಗಳನ್ನೂ ಎಎಪಿ ಕಾರ್ಯಕರ್ತರು ಮಾಡಿಕೊಂಡಿದ್ದರು, ಆದರೆ ಫಲಿತಾಂಶ ಪ್ರಕಟಗೊಂಡ ಬಳಿಕ ಅವರ ಎಲ್ಲಾ ನಿರೀಕ್ಷೆ ಠುಸ್ ಎಂದಿದೆ.
ಕಣಕ್ಕಿಳಿಸಿದ್ದ ಅಭ್ಯರ್ಥಿಗಳಲ್ಲಿ 25 ಮಂದಿ ಠೇವಣಿಯನ್ನೇ ಕಳೆದುಕೊಂಡಿರುವು ಎಎಪಿಗೆ ದೊಡ್ಡ ಆಘಾತವನ್ನೇ ನೀಡಿದೆ. 26 ಕ್ಷೇತ್ರಗಳಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದ ಎಎಪಿ, 62 ಕಡೆ ಮೂರನೇ ಸ್ಥಾನ ಪಡೆದಿದೆ.
117 ಸ್ಥಾನಗಳುಳ್ಳ ಪಂಜಾಬ್ನಲ್ಲಿ 100 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ಎಎಪಿ ಹೇಳಿಕೊಂಡಿತ್ತು. ಆದರೆ ಕೇವಲ 20 ಸ್ಥಾನಗಳಲ್ಲಿ ಗೆಲ್ಲಲ್ಲು ಮಾತ್ರ ಅದು ಶಕ್ತವಾಗಿದೆ.
ಪಂಜಾಬ್ನಲ್ಲಿ ಅಧಿಕಾರದ ಗದ್ದುಗೆ ಏರಲು ಭಾರೀ ಪ್ರಯತ್ನ ನಡೆಸಿದ್ದ ಎಎಪಿಗೆ ತನ್ನ ಹಲವು ಅಭ್ಯರ್ಥಿಗಳು ಠೇವಣಿಯನ್ನೇ ಕಳೆದುಕೊಂಡಿರುವುದು ಮುಜಗರಕ್ಕೀಡು ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.