ನವದೆಹಲಿ: ಮನೋಹರ್ ಪರಿಕ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಕೇಂದ್ರ ರಕ್ಷಣಾ ಖಾತೆಯನ್ನು ಹಣಕಾಸು ಸಚಿವ ಅರುಣ್ ಜೇಟ್ಲಿಯವರಿಗೆ ಸೋಮವಾರ ಹೆಚ್ಚುವರಿಯಾಗಿ ನೀಡಲಾಗಿದೆ.
ಪರಿಕ್ಕರ್ ಅವರನ್ನು ಗೋವಾ ಮುಖ್ಯಮಂತ್ರಿಯಾಗಿ ರಾಜ್ಯಪಾಲ ಮೃದುಲಾ ಸಿನ್ಹಾ ಅವರು ನೇಮಕ ಮಾಡಿದ ಹಿನ್ನಲೆಯಲ್ಲಿ, ಇಂದು ಅವರು ಕೇಂದ್ರ ರಕ್ಷಣಾ ಖಾತೆ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಕೆ ಮಾಡಿದರು.
ಮಂಗಳವಾರ ಅವರು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಗೋವಾ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
ಐಐಟಿ-ಬಾಂಬೆಯ ಎಂಜಿನಿಯರ್ ಪದವೀಧರನಾಗಿರುವ ೬೧ ವರ್ಷದ ಪರಿಕ್ಕರ್ 2012ರಲ್ಲಿ ಗೋವಾದಲ್ಲಿ ಬಿಜೆಪಿಯ ದಿಗ್ವಿಜಯಕ್ಕೆ ಕಾರಣರಾಗಿದ್ದರು. ಬಳಿಕ ಸಿಎಂ ಆಗಿ ನೇಮಕವಾಗಿದ್ದರು. ೨೦೧೪ರಲ್ಲಿ ಮೋದಿ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಅವರನ್ನು ಸಿಎಂ ಸ್ಥಾನದಿಂದ ಬಿಡಿಸಿ ಕೇಂದ್ರ ರಕ್ಷಣಾ ಸಚಿವರನ್ನಾಗಿ ನೇಮಿಸಲಾಗಿತ್ತು. ಅವರು ತೆಗೆದುಕೊಂಡ ಸರ್ಜಿಕಲ್ ಸ್ಟ್ರೈಕ್ನಂತಹ ಕಾರ್ಯಗಳು ಭಾರೀ ಪ್ರಶಂಸೆಗೂ ಕಾರಣವಾಗಿತ್ತು.
ಇದೀಗ ಗೋವಾದ ಚುನಾಯಿತ ಪ್ರತಿನಿಧೀಗಳ ಒತ್ತಾಯದ ಮೇರೆಗ ಮತ್ತೆ ಅವರನ್ನು ಗೋವಾ ಸಿಎಂ ಆಗಿ ನೇಮಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.