ಇಂಫಾಲ: ಮಣಿಪುರದಲ್ಲಿ ಸೋಮವಾರ ನಡೆದ ರಾಜಕೀಯ ಬೆಳವಣಿಗೆಯೊಂದರಲ್ಲಿ ಎನ್.ಬಿರೆನ್ ಸಿಂಗ್ ಅವರನ್ನು ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದ್ದು, ಅವರೇ ಮಣಿಪುರದ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಲಿದ್ದಾರೆ.
ಸರ್ಕಾರ ರಚನೆಗೆ ಅವಕಾಶವನ್ನು ಕೋರುವ ಸಲುವಾಗಿ ಅವರು ಶೀಘ್ರದಲ್ಲೇ ರಾಜ್ಯಪಾಲರನ್ನು ಭೇಟಿಯಾಗುವ ಸಾಧ್ಯತೆ ಇದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಪಿಯೂಶ್ ಗೋಯಲ್, ‘ಎನ್.ಬಿರೆನ್ ಸಿಂಗ್ ಅವರನ್ನು ಬಿಜೆಪಿ ಶಾಸಕಾಂಗದ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಶೀಘ್ರದಲ್ಲೇ ಅವರು ಸರ್ಕಾರ ರಚನೆಗೆ ರಾಜ್ಯಪಾಲರಲ್ಲಿ ಅನುಮತಿ ಕೋರಲಿದ್ದಾರೆ’ ಎಂದಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ, ಪಿಎಂ ನರೇಂದ್ರ ಮೋದಿಯವರಿಗೆ ಧನ್ಯವಾದ ಅರ್ಪಿಸಿರುವ ಬಿರೆನ್ ಸಿಂಗ್ ಅವರು, ’ಕಾಂಗ್ರೆಸ್ನ ದುರಾಡಳಿತವನ್ನು ಸಹಿಸಲಾಗದೆ ಬಿಜೆಪಿಗೆ ಸೇರಿದೆ, ಬಿಜೆಪಿ ಉತ್ತಮ ಆಡಳಿತ ನೀಡುತ್ತದೆ ಎಂಬ ವಿಶ್ವಾಸವಿದೆ’ ಎಂದಿದ್ದಾರೆ.
ಪ್ರಸ್ತುತ ಮಣಿಪುರ ಸಿಎಂ ಆಗಿರುವ ಒ.ಐಬೋಬಿ ಸಿಂಗ್ ಅವರು ಶೀಘ್ರದಲ್ಲೇ ರಾಜೀನಾಮೆ ನೀಡುವುದಾಗಿದೆ ಘೋಷಿಸಿದ್ದಾರೆ. ಸರ್ಕಾರ ರಚನೆಗೆ ಬೇಕಾದಷ್ಟು ಶಾಸಕರ ಬೆಂಬಲವನ್ನು ಪಡೆಯುವಲ್ಲಿ ಇವರು ವಿಫಲರಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.