ನವದೆಹಲಿ: ಇತ್ತೀಚಿನ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಹೋದರೂ ಸರ್ಕಾರದಲ್ಲಿ ಮುಸ್ಲಿಂ ಸಮುದಾಯದವರಿಗೂ ಪ್ರಾತಿನಿಧ್ಯ ಸಿಗಲಿದೆ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಭರವಸೆ ನೀಡಿದ್ದಾರೆ.
ಬಿಜೆಪಿಯಲ್ಲಿ ಮುಸ್ಲಿಂ ಶಾಸಕರು ಇಲ್ಲದೇ ಹೋದರೂ ಮುಸ್ಲಿಂ ಎಂಎಲ್ಸಿಗಳಂತು ಇದ್ದಾರೆ. ನೂತನ ಸರ್ಕಾರದಲ್ಲಿ ಮುಸ್ಲಿಂ ಪ್ರತಿನಿಧಿಗಳು ಖಂಡಿತವಾಗಿಯೂ ಇರಲಿದ್ದಾರೆ ಎಂದು ನಾಯ್ಡು ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಬಿಜೆಪಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಇದ್ದುದು ಮಿಸ್ಟೇಕ್ ಅಲ್ಲ, ವೀಕ್ನೆಸ್. ನಮಗೆ ಗೆಲ್ಲುವ ವಿಶ್ವಾಸವಿದ್ದ ಸಮರ್ಥ ಮುಸ್ಲಿಂ ಅಭ್ಯರ್ಥಿ ಸಿಕ್ಕದ ಕಾರಣ ಕಣಕ್ಕಿಳಿಸಲಿಲ್ಲ ಎಂದಿರುವ ಅವರು, ಕೆಲ ಮುಸ್ಲಿಮರು ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ ಎಂದಿದ್ದಾರೆ.
ತ್ರಿವಳಿ ತಲಾಖ್ ವಿಷಯವಾಗಿಯೇ ಕೆಲ ಮುಸ್ಲಿಂ ಮಹಿಳೆಯರು, ಅದರಲ್ಲೂ ವಿಶೇಷವಾಗಿ ಯುವತಿಯರು ನಮಗೆ ಮತ ಚಲಾಯಿಸಿದ್ದಾರೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.