ತಿರುವನಂತಪುರಂ: ವಿಧಾನಸಭಾ ಚುನಾವಣೆಗಳನ್ನೇ ಗೆಲ್ಲಲು ಕಾಂಗ್ರೆಸ್ ಹರ ಸಾಹಸಪಡುತ್ತಿರುವ ಇಂತಹ ಪರಿಸ್ಥಿತಿಯಲ್ಲೂ ತಿರುವನಂತಪುರಂನ ನಿವಾಸಿಯೊಬ್ಬರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸಂಸದ ಶಶಿ ತರೂರ್ ಅವರನ್ನು ಕಾಂಗ್ರೆಸ್ ಪಕ್ಷ ಪ್ರಧಾನಿ ಅಭ್ಯರ್ಥಿಯನ್ನಾಗಿಸಬೇಕು ಎಂದು ಕೋರಿ ಅಭಿಯಾನ ಆರಂಭಿಸಿದ್ದಾರೆ.
‘ಪೌಲ್ ತ್ರಿವಂಡರಂ’ ಎಂಬುವವರು ಆನ್ಲೈ ಪಿಟಿಷನ್ ಸೈಟ್ ಚೇಂಜ್.ಆರ್ಗ್ನಲ್ಲಿ ಪಿಟಿಷನ್ ಕ್ಯಾಂಪೇನ್ ಆರಂಭಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಶಶಿ ತರೂರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಬೇಕು ಎಂಬುದು ಇವರ ಆಶಯ. ಅದಕ್ಕಾಗಿ ಸಹಿ ಸಂಗ್ರಹಿ ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿ ಪ್ರೆಸಿಡೆಂಟ್ಗೆ ಕಳುಹಿಸಲು ನಿರ್ಧರಿಸಿದ್ದಾರೆ.
ಈಗಾಗಲೇ ಈ ಅಭಿಯಾನಕ್ಕೆ ಬೆಂಬಲಿಸಿ 6,600 ಮಂದಿ ಸಹಿ ಹಾಕಿದ್ದಾರೆ.
ದೇಶಕ್ಕೆ ಒಬ್ಬ ದೂರದೃಷ್ಟಿಯುಳ್ಳ ನಾಯಕನ ಅವಶ್ಯಕತೆ ಇದ್ದು, ತರೂರ್ ಅವರಿಗೆ ವಿಶ್ವಸಂಸ್ಥೆಯಲ್ಲಿದ್ದು 30 ವರ್ಷಗಳ ಅನುಭವವಿದೆ, ಎರಡು ಬಾರಿ ಸಂಸದನಾಗಿ ಆಯ್ಕೆಯಾಗಿದ್ದಾರೆ. ಅವರೊಬ್ಬ ಉತ್ತಮ ಪ್ರಧಾನಿ ಅಭ್ಯರ್ಥಿಯಾಗುತ್ತಾರೆ ಎಂದು ಪೌಲ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.