ನವದೆಹಲಿ: ಉತ್ತರಪ್ರದೇಶ, ಉತ್ತರಾಖಂಡಗಳಲ್ಲಿ ಹೀನಾಯ ಸೋಲುಂಡ ಬಳಿಕ ಇದೀಗ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ತನ್ನ ಪಕ್ಷದಲ್ಲಿ ರಚನಾತ್ಮಕ ಬದಲಾವಣೆಗಳನ್ನು ತರಲು ಮುಂದಾಗಿದ್ದಾರೆ.
ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ರಾಹುಲ್, ‘ನಾವು ವಿರೋಧಪಕ್ಷದಲ್ಲಿದ್ದೇವೆ, ನಮಗೆ ಏರಿಳಿತಗಳು ಇರುತ್ತವೆ. ಯುಪಿಯಲ್ಲಿ ಕೊಂಚ ಇಳಿತವಾಗಿದೆ. ಅದನ್ನು ನಾವು ಸ್ವೀಕರಿಸುತ್ತೇವೆ ಬಿಜೆಪಿಯೊಂದಿಗೆ ನಮಗೆ ಸೈದ್ಧಾಂತಿಕ ಹೋರಾಟವಿದೆ, ಈ ಹೋರಾಟವನ್ನು ಮುಂದುವರೆಸುತ್ತೇವೆ’ ಎಂದಿದ್ದಾರೆ.
ಅಷ್ಟೇ ಅಲ್ಲದೇ 5 ರಾಜ್ಯಗಳ ಪೈಕಿ 3 ರಾಜ್ಯಗಳಲ್ಲಿ ನಾವು ಗೆದ್ದಿದ್ದೇವೆ. 2ರಲ್ಲಿ ಮಾತ್ರ ಬಿಜೆಪಿ ಗೆದ್ದಿದೆ. ಆದರೆ ಪ್ರಜಾಪ್ರಭುತ್ವವನ್ನು ಬಿಜೆಪಿ ನಿರ್ಧರಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಯುಪಿಯಲ್ಲಿ ಹೀನಾಯವಾಗಿ ಸೋತಿರುವ ಹಿನ್ನಲೆಯಲ್ಲಿ ಪಕ್ಷದೊಳಗೆ ರಚನಾತ್ಮಕ ಬದಲಾವಣೆ ತರಲು ಅವರು ಮುಂದಾಗಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.