ಧಾರವಾಡ: ಪ್ರತಿಯೊಬ್ಬರೂ ಗ್ರಾಹಕರ ಹಕ್ಕುಗಳ ಬಗೆಗೆ ಅರಿತುಕೊಂಡು, ದಿನನಿತ್ಯದ ವ್ಯವಹಾರದಲ್ಲಿ ಸಂಭವಿಸುವ ಮೋಸವನ್ನು ತಡೆಯಲು ಮುಂದಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಸ್ನೇಹಲ್ ಹೇಳಿದರು.
ಇಲ್ಲಿನ ಹೊಸಬಸ್ ನಿಲ್ದಾಣದ ಹತ್ತಿರ ಇರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ,ಕಾನೂನು ಮಾಪನಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ,ವಕೀಲರ ಸಂಘ , ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ವಿದ್ಯಾವರ್ಧಕ ಸಂಘದ ಸಂಯುಕ್ತ ಆಶ್ರಯದಲ್ಲಿ, ವಿಶ್ವ ಗ್ರಾಹಕರ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ “ಡಿಜಿಟಲ್ ಯುಗದಲ್ಲಿ ಗ್ರಾಹಕರ ಹಕ್ಕುಗಳು” ಎಂಬ ವಿಷಯದ ಕುರಿತ ಕಾನೂನು ಅರಿವು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಜಾಗೋ ಗ್ರಾಹಕ್ ಜಾಗೋ ಎಂಬ ಘೋಷವಾಕ್ಯವು ಬಹಳ ಪರಿಣಾಮಕಾರಿಯಾಗಿದೆ. ಅದರ ಸಾರವನ್ನು ನಾವು ಅರಿಯಬೇಕು. ಯಾವುದೇ ವಸ್ತುಗಳನ್ನು ಖರೀದಿಸಿದಾಗಲೂ ಅಲ್ಲಿ ಮೋಸ ಹೋಗುವ ಸಾಧ್ಯತೆಗಳಿರುತ್ತವೆ. ಮಧ್ಯಮ ವರ್ಗದ ಕುಟುಂಬಗಳು ಇದುವರೆಗೆ ನಾನ್ ಡಿಜಿಟಲ್ ವ್ಯವಸ್ಥೆಯಲ್ಲಿಯೇ ನ್ಯಾಯ ಪಡೆಯಲು ಮುಂದಾಗುತ್ತಿಲ್ಲ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವಿ.ಶ್ರೀಶಾನಂದ ಮಾತನಾಡಿ, ಮೋಸ ಹೋದ ಒಬ್ಬನೇ ಗ್ರಾಹಕ ನ್ಯಾಯಾಲಯದ ಮೆಟ್ಟಿಲೇರಿದರೂ ಸಾಕು ಜಗತ್ತಿನಾದ್ಯಂತ ಇರುವ ಆ ಉತ್ಪನ್ನದ ಎಲ್ಲ ಖರೀದಿದಾರರಿಗೂ ಅದರ ಲಾಭ ಸಿಗುತ್ತದೆ ಎಂದರು.
ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷೆ ಸಮೀವುನ್ನೀಸಾ ಸಿ.ಹೆಚ್. ಮಾತನಾಡಿ, ಯಾವುದಾದರೂ ವಸ್ತಗಳನ್ನು ಖರೀದಿಸಿ ಮೋಸ ಹೋದಾಗ ನೇರವಾಗಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಗೆ ಬಂದು ದೂರು ಸಲ್ಲಿಸುವ ಕಾಲವಿತ್ತು. ಈಗ ಜಗತ್ತಿನ ಯಾವ ಮೂಲೆಯಲ್ಲಿಯಾದರೂ ಕುಳಿತು ಆನ್ಲೈನ್ನಲ್ಲಿಯೇ ದೂರು ಸಲ್ಲಿಸಲು ಅವಕಾಶವಿದೆ ಎಂದರು.
ನ್ಯಾಯಾಧೀಶರಾದ ಎಸ್.ಎಸ್.ಬಳ್ಳೊಳ್ಳಿ, ಸಿದ್ದಪ್ಪ ಹೊಸಮನಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ಬಿ.ಎಸ್.ಸಂಗಟಿ, ಪ್ರಫುಲ್ಲಾ ಎಸ್.ನಾಯ್ಕ ಇತರರು ಇದ್ದರು.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯಹಾರಗಳ ಇಲಾಖೆಯ ಹಿರಿಯ ಉಪನಿರ್ದೇಶಕ ಸದಾಶಿವ ಮರ್ಜಿ “ಆಹಾರ ಅಪವ್ಯಯ ಪ್ರಾತ್ಯಕ್ಷಿಕೆ” ಎಂಬ ವಿಷಯದ ಕುರಿತು ಉಪನ್ಯಾಸ ಹಾಗೂ ಆಹಾರ ತಜ್ಞ ಬಸವರಾಜ ಬಿಳೇಯಂಗಡಿ ಅವರು ಆಹಾರ ಕಲಬೆರಕೆಯ ಪ್ರಾತ್ಯಕ್ಷಿಕೆ ನೀಡಿದರು.
ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ.ಸಿ.ಪಿ.ಬೊಮ್ಮನಪಾದ ಸ್ವಾಗತಿಸಿದರು. ಬಸವಪ್ರಭು ಹೊಸಕೇರಿ ನಿರೂಪಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಎನ್.ಹೆಗಡೆ ವಂದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.