ನವದೆಹಲಿ: ಸ್ಥಳಿಯಾಡಳಿತ ಚುನಾವಣೆಗಳಲ್ಲಿ ಮತಯಂತ್ರದ ಬದಲು ಬ್ಯಾಲೆಟ್ ಪೇಪರ್ ಬಳಸಲು ಬೇಡಿಕೆಯಿಟ್ಟಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮತಯಂತ್ರದ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿರುವವರು ಕಾಲದೊಂದಿಗೆ ಹಿಂದಕ್ಕೆ ಚಲಿಸಲು ಪ್ರಯತ್ನಿಸುತ್ತಿದ್ದಾರೆ ಎಂದಿದ್ದಾರೆ.
ರಾಲೆಗಾಂವ್ ಸಿದ್ಧಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪೇಪರ್ ಬ್ಯಾಲೆಟ್ನಲ್ಲಿ ಚುನಾವಣೆ ನಡೆಸುವಂತೆ ಕೇಜ್ರಿವಾಲ್ ಒತ್ತಾಯಿಸುತ್ತಿರುವುದು ಸರಿಯಲ್ಲ ಎಂದಿದ್ದಾರೆ.
ಮತಯಂತ್ರದ ಬಳಕೆಯನ್ನು ನಿಲ್ಲಿಸಬಾರದು, ಜಗತ್ತು ಮುಂದಕ್ಕೆ ಚಲಿಸುತ್ತಿದೆ, ಮತಯಂತ್ರವೂ ಮುಂದಕ್ಕೆ ಹೋಗಬೇಕು. ಇದರ ಬಗ್ಗೆ ಅನುಮಾನ ಪಡುವವರು ಹಿಂದಕ್ಕೆ ಚಲಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದಿರುವ ಅಣ್ಣಾ, ಪೇಪರ್ ಬ್ಯಾಲೆಟ್ ಬಳಸಿದರೆ ಚುನಾವಣಾ ಪ್ರಕ್ರಿಯೆ ಸುಧೀರ್ಘ ಸಮಯ ತೆಗೆದುಕೊಳ್ಳುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.