ಮುಂಬಯಿ: ಉತ್ತರಪ್ರದೇಶದಲ್ಲಿ ಮುಸ್ಲಿಂ ಮತಗಳು ಒಡೆದು ಹೋಗಲು ಎಐಎಂಐಎಂ ನಾಯಕ ಅಸಾವುದ್ದೀನ್ ಓವೈಸಿಯೇ ಕಾರಣ ಎಂದು ಆರೋಪಿಸಿ ಮಹಾರಾಷ್ಟ್ರದ ನಂದೆನ್ ಎಂಬಲ್ಲಿ ಮುಸ್ಲಿಂ ಸಮುದಾಯದವರು ಭಾರೀ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯ ವೇಳೆ ಆಕ್ರೋಶಿತ ಜನರ ಗುಂಪು ಓವೈಸಿಯ ಪ್ರತಿಕೃತಿಗೆ ಶೂನಿಂದ ಮನಬಂದಂತೆ ಥಳಿಸಿ ಬಳಿಕ ಅದನ್ನು ದಹಿಸಿದೆ.
ಓವೈಸಿಯ ಪಕ್ಷ ಉತ್ತರಪ್ರದೇಶದ ಚುನಾವಣೆಯಲ್ಲಿ 40 ಸ್ಥಾನಗಳಿಗೆ ಸ್ಪರ್ಧಿಸಿತ್ತು. ಆದರೆ ಒಂದೇ ಒಂದು ಸ್ಥಾನವನ್ನು ಗೆಲ್ಲುವುದಕ್ಕೂ ಅದಕ್ಕೆ ಸಾಧ್ಯವಾಗಿಲ್ಲ.
ಆದರೆ ಈತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರಿಂದ ಮುಸ್ಲಿಂ ಮತಗಳು ಹಂಚಿ ಹೋಯಿತು, ಇದರಿಂದ ಕಾಂಗ್ರೆಸ್, ಸಮಾಜವಾದಿ ಪಕ್ಷಕ್ಕೆ ಸೋಲಾಯಿತು ಮತ್ತು ಬಿಜೆಪಿಗೆ ಸಹಾಯವಾಯಿತು ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಓವೈಸಿ ಮುರ್ದಾಬಾದ್ ಎಂಬ ಘೋಷಣೆಗಳನ್ನು ಕೂಗಿ, ಓವೈಸಿ ಪ್ರತಿಕೃತಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಈ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.