ನವದೆಹಲಿ: ಗೋವಾ ಚುನಾವಣೆಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಎಡವಿದಕ್ಕೆ ಈಗಾಗಲೇ ಸಾಕಷ್ಟು ಟೀಕೆಗಳನ್ನು ಕೇಳಿರುವ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಇದೀಗ ತಮ್ಮ ನಾಯಕರ ವಿರುದ್ಧವೇ ಹರಿಹಾಯ್ದಿದ್ದಾರೆ.
ಚುನಾವಣೆಗೂ ಮುನ್ನವೇ ಗೋವಾ ಫಾರ್ವರ್ಡ್ ಪಾರ್ಟಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಎಂಬ ಸಲಹೆಯನ್ನು ನಾನು ನೀಡಿದ್ದೆ. ಆದರೆ ನಮ್ಮ ಪಕ್ಷದ ನಾಯಕರುಗಳು ನನ್ನ ಸಲಹೆಯನ್ನು ತಿರಸ್ಕರಿಸಿದರು ಎಂದಿದ್ದಾರೆ.
ಸರ್ಕಾರ ರಚನೆ ಮಾಡಲಾಗದೇ ಇರುವುದಕ್ಕೆ ನನ್ನನ್ನು ವಿಲನ್ ಮಾಡುವುದು ಉಚಿತವಲ್ಲ ಎಂದಿರುವ ಅವರು, ಮೊದಲೇ ಮೈತ್ರಿ ಮಾಡಿಕೊಂಡಿದ್ದರೆ ಕಾಂಗ್ರೆಸ್ ಗೋವಾದಲ್ಲಿ ಬಹುಮತ ಪಡೆಯುತ್ತಿತ್ತು ಎಂದಿದ್ದಾರೆ.
ಗೋವಾದಲ್ಲಿ ಕಾಂಗ್ರೆಸ್ ಉಸ್ತುವಾರಿಯಾಗಿರುವ ದಿಗ್ವಿಜಯ್ ಸಿಂಗ್, ಚುನಾವಣೆಯ ಬಳಿಕ ಸಣ್ಣ ಪಕ್ಷಗಳನ್ನು ಮತ್ತು ಸ್ವತಂತ್ರ ಅಭ್ಯರ್ಥಿಗಳನ್ನು ಓಲೈಸುವಲ್ಲಿ ವಿಫಲವಾಗಿದ್ದಕ್ಕೆ ತಮ್ಮ ಪಕ್ಷದ ಹಾಗೂ ಮೈತ್ರಿ ಪಕ್ಷದ ನಾಯಕರುಗಳಿಂದ ತೀವ್ರ ಟೀಕೆಗಳನ್ನು ಎದುರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.