ಲಕ್ನೋ: ಡಿಸೆಂಬರ್ನೊಳಗೆ ಯುಪಿಯ 30 ಜಿಲ್ಲೆಗಳನ್ನು ಬಯಲು ಶೌಚಮುಕ್ತಗೊಳಿಸಲು ನೂತನ ಪಣತೊಟ್ಟಿರುವ ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈಗಿನಿಂದಲೇ ಕಾರ್ಯೋನ್ಮುಖರಾಗಿದ್ದಾರೆ.
ಪದಗ್ರಹಣ ಮಾಡಿದ ಮರುದಿನವೇ ಅದಿಕಾರಿಗಳಿಂದ ಸ್ವಚ್ಛತೆಯ ಪ್ರತಿಜ್ಞೆ ಮಾಡಿಸಿಕೊಂಡ ಅವರು, ಪ್ರತಿಜ್ಞೆಯನ್ನು ಸ್ಪಷ್ಟ ರೀತಿಯಲ್ಲಿ ಅನುಷ್ಠಾನಕ್ಕೆ ತರುವಂತೆ ಹೇಳಿದ್ದಾರೆ
ಅಲ್ಲದೇ ಡಿ.30ರೊಳಗೆ 30 ಜಿಲ್ಲೆಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಬೇಕು ಮತ್ತು ಈ ಜಿಲ್ಲೆಗಳನ್ನು ಸಂಪೂರ್ಣ ಬಯಲು ಶೌಚ ಮುಕ್ತಗೊಳಿಸಬೇಕು ಎಂದು ಆದೇಶಿಸಿದ್ದಾರೆ.
‘ಬೇರೆ ರಾಜ್ಯಗಳಿಗೆ ಹೋಲಿಸಿದರೆ ಸ್ವಚ್ಛತೆಯಲ್ಲಿ ಯುಪಿ ಬಹಳಷ್ಟು ಹಿಂದೆ ಬಿದ್ದಿದೆ, ಗ್ರಾಮೀಣ ಮತ್ತು ನಗರಗಳಲ್ಲಿ ಸಫಾಯಿ ಕರ್ಮಚಾರಿಗಳ ಕೊರೆತೆಯಿಲ್ಲದಿದ್ದರೂ ಈ ನಿಟ್ಟಿನಲ್ಲಿ ಕಟ್ಟುನಿಟ್ಟು ಕಾರ್ಯಗಳಾಗುತ್ತಿಲ್ಲ’ ಎಂದು ಯೋಗಿ ಅಭಿಪ್ರಾಯಪಟ್ಟಿದ್ದಾರೆ.
ಅಲ್ಲದೇ ಸ್ವಚ್ಛತೆಗಾಗಿ ವರ್ಷದಲ್ಲಿ ೧೦೦ ಗಂಟೆಗಳನ್ನು ಮೀಸಲಿಡುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.