ನವದೆಹಲಿ: ಬಡತನ ರೇಖೆಗಿಂತ ಕೆಳಗಿರುವ ಹಿರಿಯ ನಾಗರಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರಸರ್ಕಾರವು ‘ರಾಷ್ಟ್ರೀಯ ವಯೋಶ್ರೀ ಯೋಜನೆ’ಯನ್ನು ಜಾರಿಗೆ ತರಲು ಮುಂದಾಗಿದೆ.
ಈ ಯೋಜನೆಯಡಿ ಸಹಾಯಕ ಸಾಧನಗಳ ಅಗತ್ಯವಿರುವ ಹಿರಿಯ ನಾಗರಿಕರಿಗೆ ಶ್ರವಣ ಸಾಧನ ಮತ್ತು ವ್ಹೀಲ್ ಚೇರ್ಗಳನ್ನು ಒದಗಿಸಲಾಗುತ್ತದೆ. ರೂ.477 ಕೋಟಿಯ ಯೋಜನೆ ಇದಾಗಿದೆ.
ಮಾರ್ಚ್ 25ರಂದು ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಕಲ್ಯಾಣ ಸಚಿವ ತಾವರ್ಚಂದ್ ಗೆಹ್ಲೋಟ್ ಹಾಗೂ ಪ್ರಸಾರ ಖಾತೆ ಸಚಿವ ವೆಂಕಯ್ಯ ನಾಯ್ಡು ಅವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಆರ್ಥಿಕವಾಗಿ ದುರ್ಬಲರಾಗಿರುವ ಹಿರಿಯ ನಾಗರಿಕರನ್ನು ಸಕ್ರಿಯ ಜೀವನಕ್ಕೆ ಮರಳುವಂತೆ ಮಾಡುವುದು, ಸಹಾಯಕ ಸಧನಗಳನ್ನು ಒದಗಿಸುವ ಮೂಲಕ ಅವರನ್ನು ಅನಾರೋಗ್ಯದಿಂದ ಸಾಮಾನ್ಯ ಜೀವನಕ್ಕೆ ಮರಳಿಸುವ ಮೂಲಕ ವಯೋ ಸ್ನೇಹಿ ಸಮಾಜದ ನಿರ್ಮಾಣ ಮಾಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.