ನವದೆಹಲಿ: ಭಾರತ ಸರ್ಕಾರ ಪಾಕಿಸ್ಥಾನ ಆಕ್ರಮಿತ ಕಾಶ್ಮೀರ ಮತ್ತು ಗಿಲ್ಗಿಟ್-ಬಲ್ತಿಸ್ಥಾನ್ಗಳನ್ನು ಪಾಕಿಸ್ಥಾನದ ಕಪಿಮುಷ್ಟಿಯಿಂದ ಬಿಡಿಸಿ ಸ್ವತಂತ್ರಗೊಳಿಸಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿಕೆ ನೀಡಿದ್ದಾರೆ.
ಗಿಲ್ಗಿಟ್-ಬಲಿಸ್ಥಾನವನ್ನು ಒಳಗೊಂಡಂತೆ ಜಮ್ಮು ಕಾಶ್ಮೀರವನ್ನು ಅದರ ಮೂಲ ರೂಪಕ್ಕೆ ತರುವುದು ನಮ್ಮ ಗುರಿ ಎಂದಿದ್ದಾರೆ. ಪಾಕಿಸ್ಥಾನ ಗಣರಾಜ್ಯೋತ್ಸವ ಆಚರಿಸಿಕೊಳ್ಳುತ್ತಿರುವ ದಿನವೇ ಅವರು ಈ ಹೇಳಿಕೆ ನೀಡಿದ್ದಾರೆ.
ಮಾ.23ರಂದು ಪಾಕಿಸ್ಥಾನದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ೧೯೪೦ರ ಈ ದಿನ ಮುಸ್ಲಿಮರಿಗೆ ಪ್ರತ್ಯೇಕ ರಾಷ್ಟ್ರದ ಬೇಡಿಕೆಯ ಪ್ರಸ್ತಾಪವನ್ನು ಲಾಹೋರ್ನಲ್ಲಿ ಮಂಡಿಸಲಾಗಿತ್ತು. ಹೀಗಾಗೀ ಈ ದಿನವನ್ನು ಅಲ್ಲಿ ’ಪಾಕಿಸ್ಥಾನ ದಿನ’ ಅಥವಾ ಗಣತಂತ್ರ ದಿನವನ್ನಾಗಿ ಆಚರಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.