ನವದೆಹಲಿ: ನರೇಂದ್ರ ಮೋದಿ ಸರ್ಕಾರ ಮೇ.26ರಂದು ಒಂದು ವರ್ಷ ಪೂರೈಸುತ್ತಿದೆ. ಈ ಹಿನ್ನಲೆಯಲ್ಲಿ ಎಲ್ಲಾ ಕಡೆಯಲ್ಲೂ ಸರ್ಕಾರ ಮಾಡಿದ ಸಾಧನೆಗಳ ಬಗ್ಗೆಯೇ ಚರ್ಚೆ ನಡೆಸಲಾಗುತ್ತಿದೆ. ಈ ಬಗ್ಗೆ ಸಮೀಕ್ಷೆಯೊಂದನ್ನು ನಡೆಸಲಾಗಿದ್ದು, ಇದರಲ್ಲಿ ಕೇಂದ್ರದ ಬಗೆಗಿನ ಜನರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ.
ಸಮೀಕ್ಷೆಗೊಳಪಟ್ಟ ಅರ್ಧದಷ್ಟು ಅಂದರೆ ಶೇ.48ರಷ್ಟು ಮಂದಿ ನರೇಂದ್ರ ಮೋದಿಯವರ ಜನಪ್ರಿಯತೆ ಕುಗ್ಗಿದೆ ಎಂದರೆ, ಶೇ.60ರಷ್ಟು ಜನ ಅವರು ಬಡವರ ವಿರೋಧಿ ಮತ್ತು ರೈತ ವಿರೋಧಿಯಾಗಿ ಕಾಣಿಸುತ್ತಿದ್ದಾರೆ ಎಂದಿದ್ದಾರೆ.
ಸಚಿವೆ ಸುಷ್ಮಾ ಸ್ವರಾಜ್ ಅವರು ಕಾರ್ಯನಿರ್ವಹಣೆಯಲ್ಲಿ ಉಳಿದ ಸಚಿವರಿಗಿಂತ ಉತ್ತಮರು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. 50ರಷ್ಟು ಮಂದಿ ಇವರು ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದಿದ್ದಾರೆ.
ವಿವಾದಾತ್ಮಕ ಭೂಸ್ವಾಧೀನ ಮಸೂದೆಯನ್ನು ಕೇಂದ್ರ ಸರ್ಕಾರ ವಾಪಾಸ್ ಪಡೆಯಬೇಕು ಎಂದು ಶೇ.78ರಷ್ಟು ಮಂದಿ ಅಭಿಪ್ರಾಯಪಟ್ಟಿದ್ದಾರೆ.
ಇಂಡಿಯಾ ಟಿವಿ ಮತ್ತು ಸಿ-ವೋಟರ್ಸ್ ಜಂಟಿಯಾಗಿ ಈ ಸಮೀಕ್ಷೆಯನ್ನು ನಡೆಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.