ನವದೆಹಲಿ: ಸಾರ್ವಜನಿಕರ ಅನುಕೂಲಕ್ಕಾಗಿ ಉಚಿತ ರೋಗ ತಪಾಸಣಾ( free diagnostic tests) ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಇದರ ಅಡಿಯಲ್ಲಿ ರಕ್ತಪರೀಕ್ಷೆ, ಎಕ್ಸ್ ರೇ ಮತ್ತು ಅಡ್ವಾನ್ಸ್ಡ್ ಸಿಟಿ ಸ್ಕ್ಯಾನ್ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುತ್ತದೆ.
ಖಾಸಗಿ ರೋಗ ತಪಾಸಣಾ ಕೇಂದ್ರಗಳು ಜನರನ್ನು ಸುಲಿಗೆ ಮಾಡುತ್ತಿವೆ, ಇವುಗಳು ದುಬಾರಿ ಮತ್ತು ಅಸಮರ್ಥವಾಗಿದೆ. ಬಡವರಿಗೆ ಕೈಗೆಟುಕುತ್ತಿಲ್ಲ ಎಂದು ಆರೋಗ್ಯ ಆರ್ಥಿಕ ತಜ್ಞರು, ಸಾರ್ವಜನಿಕ ಆರೋಗ್ಯ ತಜ್ಞರು ನಿರಂತರವಾಗಿ ಆರೋಪಿಸುತ್ತಾ ಬಂದಿರುವ ಹಿನ್ನಲೆಯಲ್ಲಿ ಸರ್ಕಾರ ಇಂತಹ ಒಂದು ಯೋಜನೆ ಜಾರಿಗೆ ಚಿಂತನೆ ನಡೆಸಿದೆ.
ಈ ಯೋಜನೆಯಡಿಯಲ್ಲಿ ಪ್ರಸ್ತುತ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿರುವ ಆರೋಗ್ಯ ತಪಾಸಣಾ ಕೇಂದ್ರಗಳನ್ನು ಬಲಿಷ್ಠಗೊಳಿಸುವುದು, ಅವುಗಳ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವುದು ಮತ್ತು ರಕ್ತದ ಮಾದರಿ ಸಂಗ್ರಹಿಸಲು, ವರದಿ ಮಾಡಲು ಮುಂತಾದ ಕಾರ್ಯಗಳಿಗೆ ಖಾಸಗಿಯ ಸಹಭಾಗಿತ್ವವನ್ನು ಪಡೆಯಲು ರಾಜ್ಯ ಸರ್ಕಾರಗಳಿಗೆ ನೆರವು ನೀಡುವ ಪ್ರಸ್ತಾಪವಿದೆ.
ಬಡವರ ಪಾಲಿಗೆ ಗಗನಕುಸುಮವಾಗಿರುವ ರೋಗ ನಿರ್ಣಾಯಕ ತಪಾಸಣೆಯನ್ನು ಉಚಿತವಾಗಿಸುವುದು ಒಂದು ಅತ್ಯುತ್ತಮ ಯೋಜನೆಯಾಗಿದೆ. ಇದರಿಂದ ಬಡವರು ತಮ್ಮ ರೋಗಗಳ ಬಗ್ಗೆ ಸಕಾಲಕ್ಕೆ ತಿಳಿದುಕೊಳ್ಳುವುದು ಸಾಧ್ಯವಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.