ಕುರುಕ್ಷೇತ್ರ: ಬಲಿಷ್ಠ ಭಾರತವನ್ನು ನಿರ್ಮಿಸುವ ಸಲುವಾಗಿ ಭ್ರಷ್ಟಾಚಾರ, ಜಾತೀಯತೆ ಮತ್ತು ಕಾಂಗ್ರೆಸ್ನ್ನು ನಿರ್ಮೂಲನೆ ಮಾಡುವುದು ಬಿಜೆಪಿ ಪ್ರಮುಖ ಆದ್ಯತೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ.
ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದ 3 ದಿನಗಳ ರಾಜ್ಯಮಟ್ಟದ ’ಪಂಡಿತ್ ದೀನ್ದಯಾಳ್ ಉಪಾಧ್ಯಾಯ ಶತಾಬ್ದಿ ಕಾರ್ಯಕರ್ತ ವಿಸ್ತಾರ್’ನ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಜಾತಿ, ಭ್ರಷ್ಟಾಚಾರ, ಪ್ರಾದೇಶಿಕತೆ ಮತ್ತು ಕಾಂಗ್ರೆಸ್ ಮುಕ್ತ ಬಲಿಷ್ಠ ಭಾರತದ ಗುರಿಯನ್ನು ತಲುಪಲು ಶ್ರದ್ಧೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಜನಸಂಘದ ಧುರೀಣ ದೀನ್ ದಯಾಳ್ ಅವರ ಜನ್ಮ ಶತಮಾನೋತ್ಸವದ ಆಚರಣೆಯನ್ನು ಈ ವರ್ಷ ನಡೆಸಲಾಗುತ್ತಿದೆ, ಈ ಹಿನ್ನಲೆಯಲ್ಲಿ ಬಿಜೆಪಿ ತನ್ನ ಹೆಜ್ಜೆಗುರುತನ್ನು ವಿಸ್ತರಿಸಿಕೊಳ್ಳಬೇಕು, ಕಾರ್ಯಕರ್ತರು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದರು.
ಕೇಂದ್ರ, ರಾಜ್ಯ ಸರ್ಕಾರಗಳ ಯೋಜನೆಗಳನ್ನು, ಕಾರ್ಯಕ್ರಮಗಳನ್ನು ಜನರ ಬಳಿಗೆ ಕೊಂಡೊಯ್ಯುವ ಕಾರ್ಯವೂ ಕಾರ್ಯಕರ್ತರಿಂದ ಆಗಬೇಕು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.