ಲಂಡನ್: ಭಾರತೀಯ ಮೂಲದ ಸಂಸದೆ ಪ್ರೀತಿ ಪಟೇಲ್ ಅವರು ಬ್ರಿಟನ್ನಲ್ಲಿ ಪ್ರಧಾನಿ ಡೇವಿಡ್ ಕ್ಯಾಮರೂನ್ ಅವರ ನೂತನ ಸಂಪುಟದಲ್ಲಿ ಉದ್ಯೋಗ ಖಾತೆಯ ರಾಜ್ಯ ಸಚಿವೆಯಾಗಿ ನೇಮಕವಾಗಿದ್ದಾರೆ.
ಈ ಮೂಲಕ ಸಂಪುಟ ದರ್ಜೆಯ ಸ್ಥಾನಮಾನ ಪಡೆದುಕೊಂಡ ಭಾರತೀಯ ಮೂಲದ ಬ್ರಿಟನ್ ಪ್ರಜೆ ಎಂಬ ಹೆಗ್ಗಳಿಕೆ ಪಡೆದುಕೊಂಡಿದ್ದಾರೆ.
ಅವರು ಇತ್ತೀಚಿಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ವಿತಮ್ ಕ್ಷೇತ್ರದಲ್ಲಿ ಶೇ.58ರಷ್ಟು ಮತಗಳನ್ನು ಪಡೆದು ಆಯ್ಕೆಯಾಗಿದ್ದರು. ಇವರು ಜುಲೈ 2014ರಿಂದ ಮೇ 2015ರವರೆಗೆ ಖಜಾನೆ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
43 ವರ್ಷದ ಪ್ರೀತಿ ಮೊದಲ ಬಾರಿಗೆ 2010ರಲ್ಲಿ ಇವರು ವಿತಮ್ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.