ನವದೆಹಲಿ: ಉತ್ತರಪ್ರದೇಶದಲ್ಲಿ ಒಂದು ಅಗಾಧ ಗೆಲುವಿನ ಬಳಿಕ ಬಿಜೆಪಿಯ ಮುಂದಿನ ಗುರಿ ಗುಜರಾತ್ ಆಗಿದ್ದು, ಗುಜರಾತ್ನಲ್ಲಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ.
ಉತ್ತರಪ್ರದೇಶದಂತೆ ಗುಜರಾತ್ನ್ನು ಬಿಜೆಪಿ ಬಲ ಹೆಚ್ಚಿಸುವ ಗುರಿಯೊಂದಿಗೆ ಬಿಜೆಪಿ ಪಕ್ಷ ಗುಜರಾತ್ ಚುನಾವಣೆಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ರನ್ನು ಬಿಜೆಪಿಯ ಗುಜರಾತ್ ಚುನಾವಣಾ ಪ್ರಚಾರಕರಾಗಿ ಮಾಡಲು ಮುಂದಾಗಿದೆ.
ರಾಜ್ಯ ಬಿಜೆಪಿ ಅಧ್ಯಕ್ಷ ಜೀತು ವಘಾನಿ ಪಕ್ಷದ ಶಾಸಕರು, ನಗರಸಭಾ ಸದಸ್ಯರೊಂದಿಗೆ ರಾಜ್ಕೋಟ್ನಲ್ಲಿ ಸಭೆ ನಡೆಸಿದ್ದು, ಬಿಜೆಪಿಯು ಪಡೆಯಬಹುದಾದ ಸಂಭವನೀಯ ಸ್ಥಾನಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅಲ್ಲದೇ ಯೋಗಿ ಆದಿತ್ಯನಾಥ್ ಅವರು ಗುಜರಾತ್ ಚುನಾವಣಾ ಪ್ರಚಾರಕರಾಗಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಮಿತ್ ಶಾ ಅವರು ಮಾರ್ಚ್ ೨೯ರಿಂದ ಎರಡು ದಿನಗಳ ಗುಜರಾತ್ ಪ್ರವಾಸದ ಭಾಗವಾಗಿ ಅಹ್ಮದಾಬಾದ್ನಲ್ಲಿ ಇರಲಿದ್ದಾರೆ. ಅವರು ರಾಜ್ಯದ ವಿವಿಧ ಪ್ರದೇಶಗಳಲ್ಲಿ ಚುನಾವಣಾ ತಯಾರಿಯ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.