ಅಹಮದಾಬಾದ್ : ಕಳೆದ ಲೋಕಸಭೆ ಚುನಾವಣೆಯ ಸಂದರ್ಭ ಅಹಮದಾಬಾದ್ ಶಾಲೆಯೊಂದರಲ್ಲಿ ಮತಚಲಾಯಿಸಿದ ಬಳಿಕ ನರೇಂದ್ರ ಮೋದಿಯವರು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದರು. ಇದು ನೀತಿ ಸಂಹಿತೆಯ ಉಲ್ಲಂಘನೆ ಎಂದು ಆರೋಪಿಸಿ ಎಎಪಿ ಪಕ್ಷದ ನಿಶಾಂತ್ ವರ್ಮಾ ಅವರು ಚುನಾವಣಾ ಆಯೋಗಕ್ಕೆ ದೂರು ದಾಖಲು ಮಾಡಿದ್ದರು. ಇದನ್ನು ವಿಚಾರಣೆ ನಡೆಸಿದ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.
ನಿಶಾಂತ್ ನೀಡಿದ ದೂರಿನ ಅನ್ವಯ ಚುನಾವಣಾ ಆಯೋಗವು ಅಹಮದಾಬಾದ್ ಪೊಲೀಸರಿಗೆ ಎಫ್ಐಆರ್ ದಾಖಲಿಸುವಂತೆ ಮತ್ತು ತನಿಖೆ ನಡೆಸುವಂತೆ ಸೂಚಿಸಿತ್ತು. ಈ ಪ್ರಕರಣದಲ್ಲಿ ಮೋದಿ ತಪ್ಪೆಸಗಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದು ಇಂದು ಮೋದಿ ಅವರ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ಸ್ಥಳೀಯ ನ್ಯಾಯಾಲಯ ತಿರಸ್ಕರಿಸಿದೆ.
ಪ್ರಕರಣದ ಸಂಬಂಧ ಸಲ್ಲಿಸಿರುವ ದಾಖಲೆಗಳಿಂದ ಮೋದಿ ಅವರ ವಿರುದ್ಧದ ಆರೋಪ ಸಾಬೀತಾಗದೇ ಇರುವುದರಿಂದ ಕೋರ್ಟ್ ಪ್ರಕರಣವನ್ನು ವಜಾಗೊಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.