ತುಮಕೂರು: ಮನುಕುಲದ ಉದ್ಧಾರಕ್ಕಾಗಿ ಟೊಂಕ ಕಟ್ಟಿ ನಿಂತ ಕಾಯಕಯೋಗಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಬದುಕು ಸ್ಮರಣೀಯ ಎಂದು ರಾಜ್ಯಪಾಲ ವಜುಭಾಯಿ ವಾಲಾ ಹೇಳಿದರು.
ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ 110ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದಲ್ಲಿ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಡೆದಾಡುವ ದೇವರು ಎಂದೇ ಹೆಸರಾಗಿರುವ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರು ಭಾರತ ಕಂಡ ಅತ್ಯಂತ ಶ್ರೇಷ್ಠ ಸಂತರು ಎಂದರು.
ಕರ್ನಾಟಕದ ಸಮಸ್ತ ನಾಗರಿಕರ ಪರವಾಗಿ ಸ್ವಾಮೀಜಿಯವರಿಗೆ ಶುಭ ಕೋರುವೆ. ಭಗವಂತ ಅವರಿಗೆ ಇನ್ನಷ್ಟು ಆಯಸ್ಸು, ಆರೋಗ್ಯ ನೀಡಲಿ, ಶ್ರೀಗಳ ಸೇವೆ ನಿರಂತರವಾಗಿರಲಿ ಎಂದು ಆಶಿಸುತ್ತೇನೆ ಎಂದರು.
ರಾಜಕೀಯ ಮುಲಾಜಿಗೆ ಬೀಳದ ಅವರು, ಅಸಂಖ್ಯ ವಿದ್ಯಾರ್ಥಿಗಳಿಗೆ ಅನ್ನ ದಾಸೋಹ, ಜ್ಞಾನ ದಾಸೋಹ ನಡೆಸಿ ಇಡೀ ವಿಶ್ವಕ್ಕೆ ಮಾದರಿ ಎನಿಸಿದ್ದಾರೆ. ಜ್ಞಾನ ಎಂಬ ಶಕ್ತಿಯನ್ನು ಬಳಸಿ ಅಜ್ಞಾನದ ಪಿಡುಗನ್ನು ತೊಡೆದು ಹಾಕಿ ಕಡುಬಡವರಿಗೆ ಶಿಕ್ಷಣ ನೀಡುತ್ತಿರುವ ಸ್ವಾಮೀಜಿಯವರ ಕಾಯಕವು ಸಾರ್ಥಕ ಎಂದರು. ಕಾವಿ ತೊಟ್ಟವರೆಲ್ಲರಿಗೂ ಶ್ರೀಗಳು ಮಾದರಿಯಾಗಿದ್ದಾರೆ.
ಗುರುವಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸುತ್ತೂರು ಮಠದ ದೇಶಿ ಕೇಂದ್ರ ಸ್ವಾಮೀಜಿ ಮತ್ತು ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿದರು.
ಅಪಾರ ಸಂಖ್ಯೆಯಲ್ಲಿ ಶಿಷ್ಯ ವೃಂದ ಹಾಗೂ ಭಕ್ತರು ಪಾಲ್ಗೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.