ಲಕ್ನೋ: ನೀರಿಲ್ಲದೆ ಒಣಗಿ ಬರಡು ಭೂಮಿಯಾಗಿರುವ ಉತ್ತರಪ್ರದೇಶದ ಬುಂದೇಲ್ಖಂಡ್ ಪ್ರದೇಶಕ್ಕೆ ಸಿಎಂ ಯೋಗಿ ಆದಿತ್ಯನಾಥ ಅವರು 47 ಕೋಟಿ ರೂಪಾಯಿಯ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.
ಬುಂದೇಲ್ಖಂಡ್ನಲ್ಲಿ ಜನರಿಗೆ ಮತ್ತು ದನ ಕರುಗಳಿಗೆ ನೀರಿನ ಯಾವುದೇ ಕೊರತೆಯಾಗಬಾರದು ಎಂದಿರುವ ಅವರು, ಹೆಚ್ಚುವರಿ ಅನುದಾನ ಬೇಕಾದರೂ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಇದೇ ತಿಂಗಳಲ್ಲಿ ಬುಂದೇಲ್ಖಂಡ್ಗೆ ತೆರಳಿ ಅಲ್ಲಿನ ಸ್ಥಿತಿಗತಿಗಳ ಅಧ್ಯಯನ ನಡೆಸಲು ಅವರು ಚಿಂತಿಸಿದ್ದಾರೆ. ಅಲ್ಲದೇ 15 ವರ್ಷಗಳಿಂದ ಸರ್ಕಾರಗಳ ನಿರ್ಲಕ್ಷ್ಯಕ್ಕೊಳಗಾಗಿರುವ ಈ ಪ್ರದೇಶವನ್ನು ಅತ್ಯಂತ ಯೋಜಿತ ರೀತಿಯಲ್ಲಿ ಅಭಿವೃದ್ಧಿಪಡಿಸುವ ಭರವಸೆಯನ್ನೂ ಅವರು ನೀಡಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಅನುದಾನದಡಿ ಬುಂದೇಲ್ಖಂಡ್ ರೈತರಿಗೆ 1೧,304 ಕೋಟಿ ರೂಪಾಯಿ ಪ್ಯಾಕೇಜ್ ನೀಡುವುದಾಗಿ ಕಳೆದ ವರ್ಷ ಕೇಂದ್ರ ಘೋಷಣೆ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.