ಲಕ್ನೋ: ಮದ್ಯ ಮಾರಾಟದ ಬಗ್ಗೆ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಚಾಚೂ ತಪ್ಪದೆ ಪಾಲನೆ ಮಾಡಲು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮುಂದಾಗಿದ್ದಾರೆ. ಇದೀಗ ಶಾಲೆಗಳ, ಕಾಲೇಜುಗಳ, ಧಾರ್ಮಿಕ ಸ್ಥಳಗಳ ಸಮೀಪ ಮದ್ಯ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿದ್ದ ಮದ್ಯದಂಗಡಿಯನ್ನು ಬೇರೆಡೆಗೆ ವರ್ಗಾಯಿಸುವ ಪ್ರಕ್ರಿಯೆಗಳು ಆರಂಭವಾಗಿದೆ. ಆದರೆ ವಾಸಸ್ಥಳಗಳಿಗೆ ಮದ್ಯದಂಗಡಿಯನ್ನು ಸ್ಥಳಾಂತರಿಸುವುದಕ್ಕೆ ಮಹಿಳೆಯರಿಂದ, ಕೆಲ ಎನ್ಜಿಓಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲು ಯೋಗಿ ಸರ್ಕಾರ ಮುಂದಾಗಿದೆ.
ಕೆಲವೆಡೆ ಮದ್ಯದಂಗಡಿಗಳನ್ನು ಲೂಟಿ ಮಾಡುವ, ಅವುಗಳ ಮೇಲೆ ದಾಳಿ ಮಾಡುವಂತಹ ಪ್ರಕರಣಗಳು ನಡೆದಿವೆ. ಇಂತಹ ಘಟನೆಗಳಿಗೆ ಕಡಿವಾಣ ಹಾಕಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸುಪ್ರೀಂ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು, ಆದೇಶವನ್ನು ಯಾರೂ ಉಲ್ಲಂಘನೆ ಮಾಡದಂತೆ ನೋಡಿಕೊಳ್ಳ ಬೇಕು ಎಂದು ಅವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.